ಮೆಟ್ರೋ ನಿಲ್ದಾಣದಲ್ಲಿ ಯುವಕನ ಆತ್ಮಹತ್ಯೆ ಯತ್ನಕ್ಕೆ ತಾಯಿ ಮೊಬೈಲ್​ ಕಿತ್ತುಕೊಂಡಿದ್ದೇ ಕಾರಣವಂತೆ…

ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಯುವಕನ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ.

ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ ತಾಯಿ ಮೊಬೈಲ್ ಕಿತ್ತುಕೊಂಡಿದ್ದೇ ಕಾರಣ ಎಂದು ಹೇಳಲಾಗಿದೆ.

ಯುವಕ ವೇಣು ಸರಿಯಾಗಿ ಕೆಲಸ ಮಾಡದೆ ಮನೆಯಲ್ಲೆ ಇರುತ್ತಿದ್ದ. ಅಲ್ಲದೆ, ಯಾವಾಗಲೂ ಮೊಬೈಲ್​ನಲ್ಲೇ ಮುಳುಗಿರುತ್ತಿದ್ದ. ಹೀಗಾಗಿ ಶುಕ್ರವಾರ ರಾತ್ರಿ ತಾಯಿ ವಸಂತ, ವೇಣುವಿಗೆ ಬೈದು, ಬುದ್ಧಿಮಾತು ಹೇಳಿದ್ದರು. ಇಂದು ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮೊಬೈಲ್ ಕಿತ್ತುಕೊಂಡು ಹೋಗಿದ್ದರು ಎನ್ನಲಾಗಿದೆ.

 

ಇದರಿಂದ ಮನನೊಂದಿದ್ದ ವೇಣು ಇಂದು ಮಧ್ಯಾಹ್ನ ಬಸವನಗುಡಿಯ ನ್ಯಾಶನಲ್‌ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಬರುತ್ತಿದ್ದ ಮೆಟ್ರೋ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿ ಪುರಂ ಪೊಲೀಸರಿಗೆ ವೇಣು ತಾಯಿ ವಸಂತ ಅವರು ಪ್ರಾಥಮಿಕ ಮಾಹಿತಿ ನೀಡಿದ್ದಾರೆನ್ನಲಾಗಿದೆ.

ಸಿಎಂ ಎಚ್​ಡಿಕೆ ಭೇಟಿ
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *