23.2 C
Bangalore
Saturday, December 14, 2019

ಮೊಬೈಲ್‌ನಿಂದಾಗಿ ಪುಸ್ತಕ ಓದುವವರ ಸಂಖ್ಯೆ ಕ್ಷೀಣ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಮೈಸೂರು: ಮೊಬೈಲ್ ಮತ್ತು ಕಂಪ್ಯೂಟರ್ ಬಳಕೆಯಿಂದ ಪುಸ್ತಕವನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ಬೇಸರ ವ್ಯಕ್ತಪಡಿಸಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಯ್ಯಜಿರಾವ್ ರಸ್ತೆಯ ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಗುರುವಾರ ‘ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ’ಕ್ಕೆ ಚಾಲನೆ ನೀಡಿ ಮಾತನಾಡಿದರು.
ದಿನ ಪೂರ್ತಿ ಮೊಬೈಲ್ ಬಳಕೆಯಲ್ಲೇ ಮುಳುಗುವ ಮಕ್ಕಳನ್ನು ಪುಸ್ತಕ ಓದುವ ಕಡೆ ಕರೆತರಬೇಕಿದೆ. ಈ ನಿಟ್ಟಿನಲ್ಲಿ ಪಾಲಿಕೆಯಲ್ಲಿ ಗ್ರಂಥಾಲಯಗಳ ಅಭಿವೃದ್ಧಿ ಬಗ್ಗೆ ಕಡ್ಡಾಯ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ಉಪನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ, ಸಾರ್ವಜನಿಕ ಗ್ರಂಥಾಲಯಗಳು ಕೇವಲ ಪತ್ರಿಕೆ, ನಿಯತಕಾಲಿಕೆಗಳ ಪ್ರದರ್ಶನಕ್ಕಷ್ಟೇ ಸೀಮಿತವಾಗಿಲ್ಲ. ಬದಲಾಗಿ ಸಾಕಷ್ಟು ಬದಲಾವಣೆ ತರುವ ಪ್ರಯತ್ನ ನಡೆಯುತ್ತಿದೆ. ಗ್ರಂಥಾಲ ಯದಿಂದ ಸಾಕಷ್ಟು ಜನರು ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಇಲ್ಲಿನ ಪುಸ್ತಕಗಳನ್ನು ಓದಿ ಇಂಜಿನಿಯರಿಂಗ್, ಮೆಡಿಕಲ್, ಐಎಎಸ್, ಐಪಿಎಸ್‌ನಂತಹ ಕಠಿಣ ಪರೀಕ್ಷೆಗಳನ್ನು ಪಾಸ್ ಮಾಡಿದ್ದಾರೆ ಎಂದರು.

ಮಹಾನಗರ ಪಾಲಿಕೆ(ಸ್ಥಳೀಯ ಸಂಸ್ಥೆಗಳು) ನಗರ ಗ್ರಂಥಾಲಯ ಪ್ರಾಧಿಕಾರ ನಿಧಿಗೆ ಪಾವತಿಸಬೇಕಾದ 20 ಕೋಟಿ ರೂ. ಕರವನ್ನು ಬಾಕಿ ಉಳಿಸಿಕೊಂಡಿದ್ದು, ನಗರದಲ್ಲಿನ ಗ್ರಂಥಾಲಯಗಳ ನಿರ್ವಹಣೆಗೆ ತೊಂದರೆಯಾಗಿದೆ. ಇನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೂಡ ಗ್ರಂಥಾಲಯಕ್ಕೆ ಪಾವತಿಸಬೇಕಾದ ಹಣವನ್ನು ಪಾವತಿಸಿಲ್ಲ. ಇದರಿಂದಾಗಿ ನಗರ ವ್ಯಾಪ್ತಿಯಲ್ಲಿ ಗ್ರಂಥಾಲಯಕ್ಕೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಜತೆಗೆ ನಿರ್ವಹಣೆಯೂ ಕಷ್ಟವಾಗುತ್ತಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಪುಷ್ಪಲತಾ ಜಗನ್ನಾಥ್, ಶೀಘ್ರ ಹಂತ ಹಂತವಾಗಿ ಬಾಕಿ ಕರ ಪಾವತಿಸಲಾಗುವುದು ಎಂದು ಭರವಸೆ ನೀಡಿದರು.

ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಪಾಲಿಕೆ ಸದಸ್ಯರಾದ ಆರ್.ನಾಗರಾಜ್, ಎಚ್.ಎಂ.ಶಾಂತಕುಮಾರಿ, ರಮೇಶ್, ನಗರ ಕೇಂದ್ರ ಗ್ರಂಥಾಲಯ ಪಾಲಕಿ ಎಚ್.ಎಂ.ಪೂರ್ಣಿಮಾ, ಕನ್ನಡ ಚಳವಳಿಗಾರ ಮೂಗೂರು ನಂಜುಂಡಸ್ವಾಮಿ ಇತರರು ಹಾಜರಿದ್ದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...