PHOTOS | ಲೋಕಸಭಾ ಚುನಾವಣೆ: ಮಾದರಿ ಮತಗಟ್ಟೆಯಲ್ಲಿ ಮತದಾರರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಬ್ಬಂದಿ

ನವದೆಹಲಿ: ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ಇಂದು ಐದನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ರಾಜಸ್ಥಾನದ ಸಂಘಾರಿಯಾದ ಹನುಮಾನ್​ಗಢದಲ್ಲಿ ಸ್ಥಾಪಿಸಲಾಗಿರುವ ಮಾದರಿ ಮತಗಟ್ಟೆಯಲ್ಲಿ ಮತ ಚಲಾಯಿಸಲು ಬಂದ ಮತದಾರರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಹಾಗೂ ನಾನಾ ಮತಗಟ್ಟೆಗಳನ್ನು ಅಲಂಕಾರಿಕ ವಸ್ತುಗಳು, ಕಲಾಕೃತಿಗಳಿಂದ ಅಲಂಕರಿಸಲಾಗಿದೆ. ಬೆಳಗ್ಗೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *