More

    ಮಾದರಿ ನೀತಿ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು

    ಚಿಕ್ಕಮಗಳೂರು: ಲೋಕಸಭಾ ಚುನಾವಣೆಯನ್ನು ಮುಕ್ತ ನ್ಯಾಮ ಸಮ್ಮತ ಮತ್ತು ಶಾಂತಿ ಸುವ್ಯವಸ್ಥೆತೆಯೊಂದಿಗೆ ಯಶಸ್ವಿಯಾಗಿ ನಡೆಯಲು ಮಾದರಿ ನೀತಿ ಸಂಹಿತೆ ಅನುಷ್ಠಾನಾಧಿಕಾರಿಗಳು ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ನು ಪಾಲಿಸುವುದರ ಮೂಲಕ ತಮ್ಮ ಕರ್ತವ್ಯಗಳನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಮೀನಾನಾಗರಾಜ್ ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ನಡೆದ ಮಾದರಿ ನೀತಿ ಸಂಹಿತೆ ಸಂಬಂಧಿಸಿದ ಅನುಷ್ಠಾನಾಧಿಕಾರಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಚೆಕ್ ಪೊಸ್ಟ್ಗಳನ್ನು ತೆರೆದು ಸಿಸಿ ಕ್ಯಾಮರ, ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಚೆಕ್ ಪೊಸ್ಟ್ಗಳಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದ್ದು, ಇಲ್ಲಿ ನಡೆಯುವ ಎಲ್ಲ ಮಾಹಿತಿಗಳನ್ನು ಸಂಗ್ರಹಿಸಲು ನೋಡಲ್ ಅಧಿಕಾರಿಗಳ ಜಾಗೃತಿ ತಂಡ ಕೆಲಸ ನಿರ್ವಹಿಸುತ್ತಿದೆ. ಸರಕು ವಾಹನಗಳು ಸೇರಿದಂತೆ ಎಲ್ಲ ರೀತಿಯ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಜೊತೆಗೆ ಜಿಲ್ಲೆಯಲ್ಲಿ ಅಬಕಾರಿ ತನಿಖಾ ತಂಡಗಳನ್ನೂ ರಚಿಸಲಾಗಿದೆ ಎಂದು ಮಾಹಿತಿನ ನೀಡಿದರು.
    ಆದಾಯ ತೆರಿಗೆ, ಇಡಿ ಇಲಾಖೆಗಳು ತಮ್ಮ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದು, ಎಲ್ಲ ಬ್ಯಾಂಕು ವಹಿವಾಟು ನಡೆಯುವ ಬ್ಯಾಂಕ್ ಖಾತೆಗಳನ್ನು ನಿರ್ವಹಿಸುವ ಮತ್ತು ಹೆಚ್ಚು ಹಣ ವಹಿವಾಟು ನಡೆಸುವ ಅಕೌಂಟ್‌ಗಳ ಬಗ್ಗೆ ನಿಗಾ ಇಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮಾದರಿ ಸಂಹಿತೆ ಅಧಿಕಾರಿಗಳ ತಂಡ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದರು.
    ಭದ್ರಾ ವೈಲ್ಡ್ ಲೈಫ್, ಆನೆ ಕಾರಿಡಾರ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಮತಗಟ್ಟೆಗಳಲ್ಲಿ ವಾಸಿಸುವ ಹಾಗೂ ಮತದಾನದ ದಿನ ಯಾವುದೇ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಾಣಿಗಳಿಂದ ಹೆಚ್ಚು ಅಪಾಯವಿರುವ ಸ್ಥಳಗಳನ್ನು ಗುರುತಿಸಿ ಈಗಿಂದಲೇ ಅದರ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
    ಸಭೆಯಲ್ಲಿ ಜಿಪಂ ಸಿಇಒ ಡಾ. ಬಿ.ಗೋಪಾಲಕೃಷ್ಣ, ಎಸ್‌ಪಿ ವಿಕ್ರಮ್ ಅಮಟೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts