More

    ರಾಜ್ಯದಲ್ಲಿ ಅಂತಾರಾಷ್ಟ್ರೀಯ ಮಾದರಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ

    ರಾಜ್ಯದಲ್ಲಿ ಅಂತಾರಾಷ್ಟ್ರೀಯ ಮಾದರಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಚಿತ್ರದುರ್ಗ: ರಾಜ್ಯದಲ್ಲಿ ಅಂತಾರಾಷ್ಟ್ರೀಯ ಮಾದರಿ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿತ್‌ಶಾ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಹಿರಿಯೂರು ತಾಲೂಕು ಐಮಂಗಲ ಪೊಲೀಸ್ ತರಬೇತಿ ಶಾಲೆ 7ನೇ ತಂಡದ ನಾಗರೀಕ ಪೊಲೀಸ್ ಕಾನ್ಸ್‌ಟೇಬಲ್ ನಿರ್ಗಮ ಪಥ ಸಂಚಲನ ಕಾರ‌್ಯ ಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ ರೊಂದಿಗೆ ಚರ್ಚಿಸಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ಅಗತ್ಯವಾದ ಸ್ಥಳ ನಿಗದಿ ಮಾಡ ಲಾಗುವುದು ಎಂದರು.

    ರಾಜ್ಯಪೊಲೀಸ್ ಇಲಾಖೆ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಹರಿಯಾಣದಲ್ಲಿ ಜರುಗಿದ ರಾಜ್ಯಗಳ ಗೃಹ ಸಚಿವರ ಹಾಗೂ ಪೊಲೀಸ್ ಮಹಾ ನಿರ್ದೇಶಕರ ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವರು,ಕರ್ನಾಟಕದ ಪೊಲೀಸರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಪೊಲೀಸರಿಗೆ ನೂತನ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುವುದು. ಅಪರಾಧಗಳ ಪತ್ತೆಗಾಗಿ 206 ಸೀನ್‌ಆಫ್ ಕ್ರೈಮ್ ಅಧಿಕಾರಿಗಳನ್ನು ನೇಮಿಸಲಾಗಿದೆ.

    ವಿಧಿ ವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. 9 ಸಂಚಾರಿ,ಹುಬ್ಬಳ್ಳಿ ಮತ್ತು ಬಳ್ಳಾರಿ ನೂತನ ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಶಿವಮೊಗ್ಗ ಹಾಗೂ ಹಾಸನದಲ್ಲೂ ಪ್ರಯೋಗಾಲಯ ಸ್ಥಾಪಿಸಲಾಗುವುದು. ಸೈಬರ್ ಅಪರಾಧ ತಡೆ ಹಾಗೂ ಪತ್ತೆಗಾಗಿ ಬುನಾದಿ ತರಬೇತಿ ಪಠ್ಯಕ್ರಮ ಅಳವಡಿಸಲಾಗಿದೆ.

    35 ಸಾವಿರ ಹುದ್ದೆಗಳು ಖಾಲಿ ಪೈಕಿ,ಪ್ರತಿ ವರ್ಷ ಸರಾಸರಿ 5 ಸಾವಿರ ಪೊಲೀಸ್ ಕಾನ್ಸಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸದ್ಯ 12 ಸಾವಿರ ಹುದ್ದೆಗಳು ಖಾಲಿ ಇವೆ. ಶೀಘ್ರದಲ್ಲೇ ಮತ್ತೆ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪಿಎಸ್‌ಐ ನೇಮಕಾತಿ ಹಗರಣ ಒಂದು ಕಪ್ಪು ಚುಕ್ಕೆಯಾಗಿದೆ.

    ಪೊಲೀಸರು ಇಲಾಖೆ ಘನತೆ ಹೆಚ್ಚಿಸಬೇಕು. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಬಾರದು. ಪ್ರತಿಭಾವಂತ ಬಡ ಮಕ್ಕಳಿಗೆ ಇಲಾಖೆಯ ಲ್ಲಿ ಉದ್ಯೋಗ ದೊರಬೇಕೇ ಹೊರತು ಶ್ರೀಮಂತರು ಉದ್ಯೋಗವನ್ನು ಖರೀದಿಸುವಂತೆ ಆಗಬಾರದು. ನೇಮಕದಲ್ಲಿ ಹೆಚ್ಚಿನ ಪಾರದರ್ಶಕತೆ ತರಲಾಗುವುದು ಎಂದರು.

    ಬುನಾದಿ ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದ 436 ಅಭ್ಯರ್ಥಿಗಳು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿದ್ದಾರೆ. ಪೊಲೀಸ್ ಕುಟುಂಬ ಗಳಿಗಾಗಿ ಎರಡು ಕೋಣೆಗಳ ಸುಸಜ್ಜಿತ 20 ಸಾವಿರ ಗೃಹಗಳನ್ನು ನಿರ್ಮಿಸಲಾಗಿದೆ.

    ರಾಜ್ಯಾದ್ಯಂತ 200 ಕೋಟಿ ರೂ.ವೆಚ್ಚದಲ್ಲಿ 117 ಹೊಸ ಠಾಣೆಗಳನ್ನು ನಿರ್ಮಿಸಲಾಗಿದೆ ಎಂದರು. 5.5 ಕೋಟಿ ರೂ.ವೆಚ್ವದಲ್ಲಿ ಪೊಲೀಸ್ ತರಬೇತಿ ಶಾಲೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಿವಿಧೋದ್ಧೇಶ ಉಪಯುಕ್ತತಾ ಸಂಕೀರ್ಣ ಹಾಗೂ ವಾಹನ ಕಟ್ಟಡಗಳನ್ನು ಸಚಿವರು ಉದ್ಘಾಟಿಸಿದರು. ಈ ವೇಳೆ ಸಾಧಕ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ಶಾಸಕಿ ಪೂರ್ಣಿಮಾ ಶ್ರೀನಿವಾಸ್,ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್,ತರಬೇತಿ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ.ಪಿ. ರವೀಂದ್ರನಾಥ,ಕೆಎಸ್‌ಪಿಎಚ್ ಮತ್ತು ಐಡಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅರುಣ್‌ಚಕ್ರವರ್ತಿ,ಪೂರ್ವ ವಲಯ ಐಜಿಪಿ ಕೆ.ತ್ಯಾಗರಾಜನ್,ಎಸ್ಪಿ ಕೆ.ಪರುಶುರಾಮ,ತರಬೇತಿ ಶಾಲೆ ಪ್ರಾಂಶುಪಾಲ ಪಿ.ಪಾಪಣ್ಣ ಮತ್ತಿತರರು ಇದ್ದರು.

    ರಾಜ್ಯದಲ್ಲಿ ಅಂತಾರಾಷ್ಟ್ರೀಯ ಮಾದರಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts