ಮಾದರಿ ಕರ್ನಾಟಕ ನಿರ್ಮಾಣ

Kdb_Rajyotsava
Published on

ಕಡಬ: ಕನ್ನಡ ನಾಡು ನುಡಿಗಾಗಿ ಸೇವೆ ಸಲ್ಲಿಸಿದ ನಮ್ಮ ಕವಿಗಳು ಸಾಹಿತಿಗಳು ಸಾಮರಸ್ಯದ ಬದುಕಿಗೆ ಸಂದೇಶ ನೀಡಿದ್ದಾರೆ, ಅವರ ಆಶಯದಂತೆ ಬಾಳಿ ಬದುಕಿ ಮಾದರಿ ಕರ್ನಾಟಕದ ಕನಸು ಸಾಕಾರಗೊಳಿಸಬೇಕು ಎಂದು ವಕೀಲ ಕೆ.ಭಾಸ್ಕರ ಗೌಡ ಕೋಡಿಂಬಾಳ ಹೇಳಿದರು.

ಕಡಬ ತಾಲೂಕುಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಡಬ ತಾಲೂಕು ತಹಸೀಲ್ದಾರ್ ಪ್ರಭಾಕರ ಖಜೂರೆ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಯುವಜನ ಒಕ್ಕೂಟ ಅಧ್ಯಕ್ಷ ಶಿವಪ್ರಸಾದ್ ಮೈಲೇರಿ, ಜಿಪಂ ಮಾಜಿ ಸದಸ್ಯ ಪಿ.ಪಿ.ವರ್ಗಿಸ್, ತಾಪಂ ಮಾಜಿ ಸದಸ್ಯ ಫಝಲ್ ಕೋಡಿಂಬಾಳ, ಕಡಬ ಕಸಾಪ ಮಾಜಿ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಕಡಬ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಅಶ್ರಫ್ ಶೇಡಿಗುಂಡಿ, ಉಪಪ್ರಾಂಶುಪಾಲೆ ಡಾ. ವೇದಾವತಿ, ಕಡಬ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಕರುಣಾಕರ ಗೋಗಟೆ, ಉಪತಹಸೀಲ್ದಾರ್ ಸಹಿದುಲ್ಲಾ ಖಾನ್ ಉಪಸ್ಥಿತರಿದ್ದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ಥಳೀಯ ಅಂಗನವಾಡಿ, ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ನಾಡು-ನುಡಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಡಬ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಪ್ರಭಾಕರ ಖಜೂರೆ ಧ್ವಜಾರೋಹಣಗೈದರು. ಕಡಬ ಪೊಲೀಸರಿಂದ ಧ್ವಜವಂದನೆ ನಡೆಯಿತು. ಬಳಿಕ ಭುವನೇಶ್ವರಿ ದೇವಿಯ ಮೆರವಣಿಗೆ ಕಡಬ ಪೇಟೆಯಲ್ಲಿ ಸಾಗಿ ಅಂಬೇಡ್ಕರ್ ಭವನದಲ್ಲಿ ಸಮಾಪನಗೊಂಡಿತು.

ಕಡಬ ತಾಪಂ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಸ್ವಾಗತಿಸಿದರು. ತಾಲೂಕು ಕಚೇರಿ ನೌಕರ ಕೌಶಿಕ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net