More

    ರಾಜ್ಯದಲ್ಲಿ ನಾಲ್ಕು ದಿನ ಸಾಧಾರಣ ಮಳೆ: ಹವಾಮಾನ ಇಲಾಖೆ ಮೂನ್ಸೂಚನೆ

    ಬೆಂಗಳೂರು: ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ನ.28ರಿಂದ ಡಿ.1ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ಇದನ್ನೂ ಓದಿ: CM ಸಿದ್ದರಾಮಯ್ಯ ಜನತಾ ದರ್ಶನಕ್ಕೆ ಹರಿದು ಬಂದ ಜನಸಾಗರ

    ರಾಜ್ಯದಲ್ಲಿ ಈಗಾಗಲೇ ಹಿಂಗಾರು ಕ್ಷೀಣಿಸಿದ್ದು, ಅ.1ರಿಂದ ನ.27ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 171 ಮಿಮೀ ಮಳೆ ಆಗಬೇಕಿತ್ತು. ಆದರೆ, 103 ಮಿಮೀ ಮಳೆಯಾಗಿದ್ದು, ಶೇ.40 ಕೊರತೆಯಾಗಿದೆ. ಅಲ್ಲದೆ, ಈ ಅವಧಿಯಲ್ಲಿ 104 ತಾಲೂಕುಗಳಲ್ಲಿ ತೀವ್ರ ಮಳೆ ಕುಂಠಿತವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts