ಗುಣಮಟ್ಟದ ಇಳುವರಿಗೆ ಆಧುನಿಕ ಹೈನುಗಾರಿಕೆ

dairy
ಶೇಡಿಕೊಡ್ಲು ಮಂದಾರ್ತಿ ಶ್ರೀ ದುರ್ಗಾ ಸಾನ್ನಿಧ್ಯದಲ್ಲಿ ಮಂದಾರ್ತಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವವನ್ನು ಮಂಗಳೂರು ದ.ಕ. ಸಹಕಾರಿ ಹಾಲು ಒಕ್ಕೂಟ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಉದ್ಘಾಟಿಸಿದರು.
Published on

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ

ದ.ಕ ಹಾಗೂ ಉಡುಪಿ ಜಿಲ್ಲೆ ಹೈನುಗಾರಿಕೆ ಮಾಡಲು ಸೂಕ್ತ ಹವಾಮಾನ ಅಲ್ಲದೇ ಇದ್ದರೂ ಆರು ಲಕ್ಷ ಲೀಟರ್‌ಗೂ ಅಧಿಕ ಹಾಲು ಸಂಗ್ರಹಿಸಿದ ನಿದರ್ಶನಗಳಿವೆ. ಇತ್ತೀಚಿನ ವರ್ಷಗಳಲ್ಲಿ ಹಾಲಿನ ಉತ್ಪಾದನೆ ಪ್ರಮಾಣ ಕುಂಠಿತವಾಗುತ್ತಿದ್ದು, ಯುವಜನರು ಆಧುನಿಕ ಹೈನುಗಾರಿಕೆ ಬಳಸಿಕೊಂಡು ಗುಣಮಟ್ಟದ ಹಾಲನ್ನು ಸಂಘಕ್ಕೆ ನೀಡಿ ಎಂದು ಮಂಗಳೂರು ದ.ಕ. ಸಹಕಾರಿ ಹಾಲು ಒಕ್ಕೂಟ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಹೇಳಿದರು.
ಶೇಡಿಕೊಡ್ಲು ಮಂದಾರ್ತಿ ಶ್ರೀ ದುರ್ಗಾ ಸಾನ್ನಿಧ್ಯದಲ್ಲಿ ಮಂದಾರ್ತಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವದ ಸಭಾಕಾರ್ಯಕ್ರಮದಲ್ಲಿ ಮಾತನಾಡಿದರು.

ಮಂದಾರ್ತಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಎಚ್.ವಿಠಲ ಶೆಟ್ಟಿ ಶೇಡಿಕೊಡ್ಲು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ದ.ಕ. ಸಹಕಾರಿ ಹಾಲು ಒಕ್ಕೂಟ ಮಾಜಿ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಕೊಡವೂರು, ಜಗದೀಶ ಕಾರಂತ ಉದ್ಘಾಟಿಸಿದರು.

ಮಾಜಿ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ನಿರ್ದೇಶಕರಾದ ನರಸಿಂಹ ಕಾಮತ್, ಎಂ.ಸುಧಾಕರ ಶೆಟ್ಟಿ, ಸ್ಮಿತಾ ಶೆಟ್ಟಿ, ಸದಾಶಿವ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ವ್ಯವಸ್ಥಾಪಕ ನಿರ್ದೇಶಕ ವಿವೇಕ ಡಿ., ವ್ಯವಸ್ಥಾಪಕ ಡಾ.ರವಿರಾಜ್ ಉಡುಪ, ಉಪವ್ಯವಸ್ಥಾಪಕ ಡಾ.ಅನಿಲ್‌ಕುಮಾರ್ ಶೆಟ್ಟಿ, ಬೆಂಗಳೂರು ಕರ್ನಾಟಕ ಹಾಲು ಮಹಾಮಂಡಲ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಮಂದಾರ್ತಿ ಹಾಲು ಉತ್ಪಾದಕ ಸಹಕಾರಿ ಸಂಘ ಮಾಜಿ ಅಧ್ಯಕ್ಷ ಬಿ.ಜಯರಾಮ ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಿಶ್ರಾಂತ ಕಾರ್ಯನಿರ್ವಾಹಕ ಡಾ.ಎಲ್.ಎಚ್.ಮಂಜುನಾಥ, ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ ಆನುವಂಶಿಕ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಮಂದಾರ್ತಿ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಚ್.ಗಂಗಾಧರ ಶೆಟ್ಟಿ, ಒಕ್ಕೂಟ ಮಾಜಿ ನಿರ್ದೇಶಕರಾದ ಬಾಂಡ್ಯ ಸುಬ್ಬಣ್ಣ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಟಿ.ಸೂರ್ಯ ಶೆಟ್ಟಿ ತೆಕ್ಕಟ್ಟೆ, ಕೆಂಚನೂರು ಸೋಮಶೇಖರ ಶೆಟ್ಟಿ, ಜಾನಕಿ ಹಂದೆ ಹಂದಟ್ಟು, ಸಬ್ಲಾಡಿ ಮಂಜಯ್ಯ ಶೆಟ್ಟಿ, ಗೋಪಾಲಕೃಷ್ಣ ಕಾಮತ್, ಅಶೋಕ್ ಕುಮಾರ್ ಶೆಟ್ಟಿ, ಉದಯ್ ಕೋಟ್ಯಾನ್, ಸಂಪಿಗೇಡಿ ಸಂಜೀವ ಶೆಟ್ಟಿ, ಶ್ರೀಪಾದ ರೈ ಪೆರ್ಡೂರು, ಕಾಡೂರು ಸುರೇಶ್ ಶೆಟ್ಟಿ, ಒಕ್ಕೂಟದ ಅಧಿಕಾರಿಗಳು, ಪಶುವೈದ್ಯರು, ವಿಸ್ತರಣಾಧಿಕಾರಿಗಳು, ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳು, ಮಾಜಿ ನಿರ್ದೇಶಕರು, ಹೈನುಗಾರರು ಉಪಸ್ಥಿತರಿದ್ದರು. ಸಂಘದ ಸುಪ್ರೀತಾ ಶೆಟ್ಟಿ ಪ್ರಾರ್ಥಿಸಿ, ಉಪಾಧ್ಯಕ್ಷ ಶಂಭುಶಂಕರ ರಾವ್ ಸ್ವಾಗತಿಸಿದರು. ಒಕ್ಕೂಟ ಉಪವ್ಯವಸ್ಥಾಪಕ ಸುಧಾಕರ ನಿರೂಪಿಸಿದರು. ಸಂಘದ ನಿರ್ದೇಶಕ ಕೃಷ್ಣ ನಾಯ್ಕ ವಂದಿಸಿದರು.

ಸನ್ಮಾನ, ಪ್ರಾರ್ಥನೆ

ಒಕ್ಕೂಟಕ್ಕೆ ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲು ನೀಡುತ್ತಿರುವ ಹೈನುಗಾರರನ್ನು ಸನ್ಮಾನಿಸಲಾಯಿತು. ಸಂಘದ ಕಚೇರಿಯಲ್ಲಿ ಗಣಪತಿ ಹೋಮ, ಹಾಲು ಉತ್ಪಾದನೆ ಹೆಚ್ಚಳಕ್ಕೆ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಸಾನ್ನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿತು. ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಿಂದ ಮಂದಾರ್ತಿ ಹಾಲು ಉತ್ಪಾದಕರ ಸಂಘದವರೆಗೆ ಮೆರವಣಿಗೆ, ಸಂಘದ ವಠಾರದಲ್ಲಿ ಗೋಪೂಜೆ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ ಅವರಿಂದ ಧಾರ್ಮಿಕ ಕಾರ್ಯಕ್ರಮದ ಉದ್ಘಾಟನೆ, ಟಿ.ಎ.ಪೈ ಹಾಗೂ ಡಾ.ಕುರಿಯನ್ ಭಾವಚಿತ್ರಕ್ಕೆ ಪುಷ್ಪನಮನ ಮುಂತಾದ ಕಾರ್ಯಕ್ರಮ ಜರುಗಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net