More

  ದೇಶದ ಭದ್ರತೆ-ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ

  ಬಾಗಲಕೋಟೆ: ಈ ಬಾರಿ 2024 ಲೋಕಸಭಾ ಚುನಾವಣೆಯು ದೇಶದ ಭದ್ರತೆ ಮತ್ತು ಭವಿಷ್ಯದ ಚುನಾವಣೆಯಾಗಿದ್ದು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗುವುದು ಅವಶ್ಯವಾಗಿದೆ ಎಂದು ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿ ಲಿಂಗರಾಜ ಪಾಟೀಲ ಹೇಳಿದರು.

  ನಗರದ ಬಿವಿವಿ ಸಂಘ ಮಿನಿ ಸಭಾಭವನದಲ್ಲಿ ಮಂಗಳವಾರ ನಡೆದ ಭಾರತೀಯ ಜನತಾ ಪಕ್ಷ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿಯ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.

  ಸ್ವಾತಂತ್ರೃದ ನಂತರದ ಭಾರತದಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಪರ್ವ ಪ್ರಾರಂಭವಾಗಿದ್ದು, ಪ್ರಪಂಚದಲ್ಲಿ ಭಾರತದ ಹೆಸರು ಮುಂಚೂಣಿಯಲ್ಲಿದೆ, ಭಾರತ ವಿರೋಧಿ ಶಕ್ತಿಗಳನ್ನು ನಿಗ್ರಹಿಸಿ ಮೆಟ್ಟಿ ನಿಲ್ಲುವ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದೆ. ಸದೃಢ ಸಮಗ್ರ ಭಾರತದ ನಿರ್ಮಾಣ ಬಿಜೆಪಿ ಹಾಗೂ ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ. ಈ ಬಾರಿ ಲೋಕಸಭಾ ಚುನಾವಣೆ ಅತ್ಯಂತ ಮಹತ್ವದಾಗಿದೆ. ಲೋಕಸಭಾ ಕ್ಷೇತ್ರದಲ್ಲಿ ಬರುವ ಪ್ರತಿ ಮತಕ್ಷೇತ್ರದಲ್ಲೂ ಈಗಾಗಲೇ ಕೋರ ಕಮಿಟಿ ಹಾಗೂ ಪದಾಧಿಕಾರಿಗಳ ಸಭೆ ಜರುಗಿವೆ. ಪಕ್ಷ ನೀಡಿದ ಜವಾಬ್ದಾರಿಯನ್ನು ಕಾರ್ಯಕರ್ತರು ನಿರ್ವಹಿಸುವ ಮೂಲಕ ಚುನಾವಣೆಯಲ್ಲಿ ಹೆಚ್ಚಿನ ಮತದಾನ ಮಾಡಿಸಬೇಕು ಎಂದರು.

  ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಗುರಿ ಪ್ರಧಾನಿ ಮೋದಿ ಹೊಂದಿದ್ದಾರೆ. ಒಂದು ದೇಶ ಒಂದು ಚುನಾವಣೆ ಗುರಿ ಜಾರಿಯಾಗಬೇಕಿದೆ. ಇನ್ನು ಅನೇಕ ಅಭಿವೃದ್ಧಿ ಪರ ಯೋಜನೆಗಳ ಮೂಲಕ ಪ್ರಪಂಚದಲ್ಲೆ ಭಾರತವನ್ನು ಒಂದು ಶ್ರೇಷ್ಠ ದೇಶವನ್ನಾಗಿ ಮಾಡುವ ಸಂಕಲ್ಪ ಮೋದಿಯವರದ್ದಾಗಿದೆ. ಹಿಗಾಗಿ ಮೋದಿಜಿಯವ ಕೈ ಬಲಪಡಿಸಲೂ ಈ ಚುನಾವಣೆ ನಮಗೆ ಪ್ರೇರಣೆಯಾಗಿದೆ ಎಂದು ತಿಳಿಸಿದರು.

  ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ದೇಶದ ಎಲ್ಲ ಕ್ಷೇತ್ರಗಳಲ್ಲಿ ಇಂದು ಅಭಿವದ್ಧಯನ್ನು ಕಾಣುತ್ತಿದ್ದೆವೆ, ಅಭಿವದ್ದಿ ಹೊಂದಿದ ದೇಶವಾಗಿ ಹೊರಹೊಮ್ಮಿದೆ, ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು. ವಿಧಾನ ಪರಿಷತ್ತ ಸದಸ್ಯ ಹನಮಂತ ನಿರಾಣಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿದರು. ಮುಖಂಡರಾದ ಜಿ.ಎನ್.ಪಾಟೀಲ, ಡಾ.ಎಂ.ಎಸ್.ದಡ್ಡೆನ್ನವರ, ಸಿ.ವಿ.ಕೋಟಿ, ಮಹಾಂತೇಶ ಶೆಟ್ಟರ, ಸಂಗಣ್ಣ ಕಲಾದಗಿ, ಬಸವರಾಜ ಯಂಕಂಚಿ, ರಾಜು ರೇವಣಕರ, ಲಕ್ಷ್ಮೀ ನಾರಾಯಣ ಕಾಸಟ್, ಸತ್ಯನಾರಾಯಣ ಹೆಮಾದ್ರಿ, ಭಾಗಿರಥಿ ಪಾಟೀಲ, ಸುಜಾತಾ ತತ್ರಾಣಿ, ಜ್ಯೋತಿ ಭಜಂತ್ರಿ, ಸುಜಾತಾ ಶಿಂಧೆ, ಶಶಿಕಲಾ ಮಜ್ಜಿಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಟಿ.ಉಪಾಧ್ಯ, ರಾಜು ನಾಯ್ಕರ, ರಾಜು ಮುದೇನೂರ, ಸುರೇಶ ಕೊಣ್ಣೂರ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts