More

    ರಿಷಿ ಸುನಕ್​ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ ಹೇಳಿದ್ದೇನು?

    ನವದೆಹಲಿ: ಭಾರತೀಯ ಮೂಲದ ರಿಷಿ ಸುನಕ್ ಬ್ರಿಟನ್​ ಪ್ರಧಾನಿ ಹುದ್ದೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಮಾತ್ರವಲ್ಲ, ತಮ್ಮ ಮುಂದಿನ ಯೋಚನೆಗಳ ಕುರಿತು ಸಂಕ್ಷಿಪ್ತ ಮಾಹಿತಿ ಹಂಚಿಕೊಂಡಿದ್ದಾರೆ.

    ಬ್ರಿಟನ್ ಪ್ರಧಾನಿಯಾದ ಹಿನ್ನೆಲೆಯಲ್ಲಿ ನಿಮಗೆ ಅಭಿನಂದನೆಗಳು. ಜಾಗತಿಕ ವಿಷಯಗಳ ವಿಚಾರವಾಗಿ ನಾನು ನಿಮ್ಮೊಂದಿಗೆ ಕೆಲಸ ಮಾಡುವ ಹಾಗೂ 2030ರ ಮಾರ್ಗಸೂಚಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉತ್ಸುಕನಾಗಿದ್ದೇನೆ. ನಾವು ನಮ್ಮ ಐತಿಹಾಸಿಕ ಸಂಬಂಧಗಳನ್ನು ಆಧುನಿಕ ಪಾಲುದಾರಿಕೆಯಾಗಿ ಪರಿವರ್ತಿಸುತ್ತಿರುವಾಗ ಬ್ರಿಟನ್​ ಭಾರತೀಯರ ‘ಜೀವಂತ ಸೇತುವೆ’ ಆಗಿರುವ ನಿಮಗೆ ದೀಪಾವಳಿಯ ವಿಶೇಷ ಶುಭಾಶಯಗಳು ಎಂದು ಮೋದಿ ಹಾರೈಸಿದ್ದಾರೆ.

    ಇನ್ಫೋಸಿಸ್​ ಸಹ ಸಂಸ್ಥಾಪಕ ಎನ್​.ಆರ್​. ನಾರಾಯಣ ಮೂರ್ತಿ ಅವರ ಅಳಿಯ, ಭಾರತ ಮೂಲದ ರಿಷಿ ಸುನಕ್​ ಅವರು ಬ್ರಿಟನ್ ಪ್ರಧಾನಿಯಾಗಿ ಇಂದು ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದರಿಂದ ಎದುರಾಳಿ ಯಾರೂ ಇಲ್ಲದ ಫಲವಾಗಿ ಸುನಕ್​ಗೆ ಪ್ರಧಾನಿ ಪಟ್ಟ ಒಲಿಯಿತು.

    31 ಪ್ರಯಾಣಿಕರಿದ್ದ ಬಸ್ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts