More

    ದೇಶದ ಏಳಿಗೆಗೆ ಶ್ರಮಿಸುತ್ತಿರುವ ಮೋದಿ

    ರಾಮದುರ್ಗ: ಪಕ್ಷದಲ್ಲಿ ಪದಾಧಿಕಾರಿ ಅಧಿಕಾರ ನಿರ್ವಹಿಸುವುದು ಮುಖ್ಯವಲ್ಲ. ಪಕ್ಷದ ಕೆಳ ಹಂತದ ಕಾರ್ಯಕರ್ತರ ನೋವುಗಳಿಗೆ, ಸಮಸ್ಯೆಗಳಿಗೆ ಸ್ಪಂದಿಸಿ, ಎಲ್ಲರನ್ನೂ ಜೊತೆಗೆ ಕರೆದುಕೊಂಡು ಪಕ್ಷ ಸಂಘಟನೆ ಮಾಡುವುದು ಮುಖ್ಯ ಎಂದು ಮಾಜಿ ಶಾಸಕ, ಬೆಳಗಾವಿ ಜಿಲ್ಲಾ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.

    ಸಮೀಪದ ತುರನೂರ ಸಿದ್ಧಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ಬಿಜೆಪಿ ರಾಮದುರ್ಗ ತಾಲೂಕು ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

    ಚಹಾ ಮಾರುತ್ತಿದ್ದ ವ್ಯಕ್ತಿಯನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಿದ ಪಕ್ಷ ಬಿಜೆಪಿ. ದಿನದ ಹದಿನೆಂಟು ಗಂಟೆಗಳ ಕಾಲ ದೇಶದ ಬಗೆಗೆ ಚಿಂತನೆ ಮಾಡುವ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಪಡೆದ ದೇಶದ ಜನತೆ ಧನ್ಯರು ಎಂದರು. ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ಇನ್ನೂ ಮೂರು ವರ್ಷಗಳ ಕಾಲ ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ಪಕ್ಷದ ಕಾರ್ಯಕರ್ತರು ಜನ ಸೇವೆ ಮಾಡಲು ಗ್ರಾಮೀಣ ಪ್ರದೇಶದ ಅಭಿವೃದ್ಧಿಯ ಚಿಂತನೆ ಮಾಡಿ ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸಬೇಕು. ಮುಂಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಪಕ್ಷದ ಕಾರ್ಯಕರ್ತರ ಹಾಗೂ ಅಧಿಕಾರ ನೀಡಿದ ಕ್ಷೇತ್ರದ ಜನತೆಯ ಸೇವೆ ಮಾಡುತ್ತೇನೆ. ಗ್ರಾಪಂ, ಜಿಪಂ, ವಿವಿಧ ಸಹಕಾರಿ ಸಂಘದ ಚುನಾವಣೆಯಲ್ಲಿ ಪಕ್ಷದ ಪರ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಯ್ಕೆಯಾಗಲು ಕಾರ್ಯಕರ್ತರು ದುಡಿಯಬೇಕು ಎಂದು ಹೇಳಿದರು.

    ನಿಕಟಪೂರ್ವ ಅಧ್ಯಕ್ಷ ಜಿ.ಜಿ. ಪಾಟೀಲ ಅವರು ನೂತನ ಅಧ್ಯಕ್ಷ ರಾಜೇಶ ಪಾಟೀಲ ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸಿದರು. ಯುವ ಧುರೀಣ ಮಲ್ಲಣ್ಣ ಯಾದವಾಡ, ನೂತನ ಅಧ್ಯಕ್ಷ ರಾಜೇಶ ಬೀಳಗಿ ಹಾಗೂ ಇತರರು ಮಾತನಾಡಿದರು. ಪಕ್ಷದ ಜಿಲ್ಲಾ ಕಾರ್ಯದರ್ಶಿ ರಾಜು ಚಿಕ್ಕನಗೌಡ್ರ, ಸುಭಾಸ ಪಾಟೀಲ, ಮಹೇಶ ಮೋಹಿತೆ, ಮಾರುತಿ ತುಪ್ಪದ ಹಾಗೂ ಜನಪ್ರತಿನಿಧಿಗಳು, ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts