More

    ಮೋದಿಗೆ ಗೊತ್ತಿಲ್ಲ ಮನೆಯ ಸಂಕಷ್ಟ

    ದೇವದುರ್ಗ: ದಿನೇ ದಿನೆ ಅಗತ್ಯ ವಸ್ತುಗಳ ಬೆಲೆ ತೀವ್ರ ಹೆಚ್ಚಳವಾಗುತ್ತಿದ್ದು, ಬಡವರು ಜೀವನ ನಡೆಸುವುದೇ ಕಷ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನೆ ನಿರ್ವಹಣೆ ಸಂಕಷ್ಟ ಗೊತ್ತಿಲ್ಲ. ಹೀಗಾಗಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀದೇವಿ ರಾಜಶೇಖರ ನಾಯಕ ಆರೋಪಿಸಿದರು.

    ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಪಟ್ಟಣದ ಜಹಿರುದ್ದೀನ್ ವೃತ್ತದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಶನಿವಾರ ಮಾತನಾಡಿದರು. ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ನಿರಂತರ ಹೆಚ್ಚಳ ಮಾಡುವ ಮೂಲಕ ಮಾನವೀಯತೆ ಮರೆತು ನಡೆದುಕೊಂಡಿದೆ ಎಂದು ದೂರಿದರು.

    ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಶೇಖರ ನಾಯಕ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ. ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬೆಲೆ ಏರಿಕೆಯಿಂದಾಗಿ ಬಡವರು ಬದುಕುವುದೇ ಕಷ್ಟವಾಗಿದೆ. ಕೂಡಲೇ ಇಂಧನ ಬೆಲೆ ಹಾಗೂ ಸಿಲಿಂಡರ್ ಬೆಲೆ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

    ತಹಸೀಲ್ದಾರ್ ಶ್ರೀನಿವಾಸ್ ಚಾಪೇಲ್‌ಗೆ ಮನವಿ ಸಲ್ಲಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್, ಪುರಸಭೆ ಅಧ್ಯಕ್ಷ ಶರಣಗೌಡ ಬಕ್ರಿ, ಶರಣಗೌಡ ಕಮತಗಿ, ಪ್ರಕಾಶ ಪಾಟೀಲ್, ರಂಗಪ್ಪ ಗೋಸಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts