More

  ಭಾರತದ ಘನತೆಯನ್ನು ಎತ್ತಿ ಹಿಡಿದ ನಾಯಕ ಮೋದಿ

  ಸಿದ್ದಾಪುರ: ಕೇಂದ್ರದಲ್ಲಿ ಹತ್ತು ವರ್ಷಗಳಿಂದ ವಿಶ್ರಾಂತಿ ಇಲ್ಲದೆ ಭ್ರಷ್ಟಾಚಾರರಹಿತ ಆಡಳಿತ ನೀಡುವ ಮೂಲಕ ಭಾರತದ ಘನತೆಯನ್ನು ಎತ್ತಿ ಹಿಡಿದ ವಿಶ್ವ ನಾಯಕ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ತಮಗೆ ಮತ ನೀಡುವಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.

  ಭಾನುವಾರ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿ, 2014ರಲ್ಲಿ ಆರ್ಥಿಕ ಪ್ರಗತಿಯಲ್ಲಿ 17ನೇ ಸ್ಥಾನದಲ್ಲಿದ್ದ ಭಾರತವನ್ನು 10 ವರ್ಷದಲ್ಲಿ 5ನೇ ಸ್ಥಾನಕ್ಕೆ ಏರಿಸಿದ್ದು ಮೋದಿ ಸರ್ಕಾರ. ದೇಶದಲ್ಲಿ 70 ವಿಮಾನ ನಿಲ್ದಾಣ ಇದ್ದದ್ದನ್ನು, 150ಕ್ಕೆ ಏರಿಸಲಾಗಿದೆ. ಯುವ ಜನತೆ ಉದ್ಯೋಗಾಕಾಂಕ್ಷಿಯಾಗದೆ ಉದ್ಯೋಗ ಸೃಷ್ಟಿಕರ್ತರಾಗಬೇಕು ಎನ್ನುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ ಎಂದರು.

  ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ನೆಲ್ಲಿರ ಚಲನ್ ಕುಮಾರ್, ವಿ.ಕೆ.ಲೋಕೇಶ್, ಅಜಿತ್ ಕರುಂಬಯ್ಯ, ಮಂಜು ಗಣಪತಿ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts