ಜಮ್ಮು ಕಾಶ್ಮೀರದಲ್ಲಿ ರಾಜಕೀಯ ನಾಯಕರೊಂದಿಗೆ ಮೋದಿ ಸಭೆ; ಮೆಹಬೂಬಾ ಮುಫ್ತಿ, ಓಮರ್​​ ಅಬ್ದುಲ್ಲಾ ಸೇರಿ ಹಲವರಿಗೆ ಆಹ್ವಾನ

jk
Published on

ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾಗಿರುವ ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜೂನ್ 24ರಂದು ಎಲ್ಲ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಆರ್ಟಿಕಲ್ 370 ಅನ್ನು ತೆಗೆದುಹಾಕಿದ ನಂತರ ಮಾಡಲಾಗುತ್ತಿರುವ ಮೊದಲನೇ ಸಭೆ ಇದಾಗಿದ್ದು, ಮೆಹಬೂಬಾ ಮುಫ್ತಿ, ಓಮರ್​​ ಅಬ್ದುಲ್ಲಾ ಸೇರಿ ಒಟ್ಟು 14 ಪಕ್ಷಗಳ ನಾಯಕರಿಗೆ ಆಹ್ವಾನ ಕಳುಹಿಸಿರುವುದಾಗಿ ಹೇಳಲಾಗಿದೆ.

ಸಭೆಯಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನ ಮಾನ ರದ್ದಿನ ವಿಚಾರ ಸೇರಿ ಅನೇಕ ಮಹತ್ತರ ವಿಚಾರಗಳು ಚರ್ಚೆ ಆಗಲಿದೆ ಎನ್ನಲಾಗಿದೆ.

ನ್ಯಾಷನಲ್​ ಕಾನ್ಫರೆನ್ಸ್​ನ ಫಾರೂಕ್ ಅಬ್ದುಲ್ಲಾ ಮತ್ತು ಅವರ ಪುತ್ರ ಒಮರ್ ಅಬ್ದುಲ್ಲಾ, ಕಾಂಗ್ರೆಸ್ ಹಿರಿಯ ಮುಖಂಡ ಗುಲಾಮ್ ನಬಿ ಆಜಾದ್, ಪಿಡಿಪಿ ಮುಖ್ಯಸ್ಥ ಮೆಹಬೂಬಾ ಮುಫ್ತಿಗೆ ಈಗಾಗಲೇ ಫೋನ್ ಮುಖಾಂತರ ಆಹ್ವಾನ ನೀಡಲಾಗಿದೆ. ಉಳಿದಂತೆ ರಾಜ್ಯದ ನಾಲ್ಕು ಮಾಜಿ ಮುಖ್ಯಮಂತ್ರಿಗಳೂ ಸಭೆಯಲ್ಲಿರಲಿದ್ದಾರೆ ಎನ್ನುವ ಮಾಹಿತಿಯಿದೆ. ಸಿಪಿಐ (ಎಂ) ನಾಯಕ ಮೊಹಮ್ಮದ್ ಯೂಸುಫ್ ತರಿಗಾಮಿ, ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷದ (ಜೆಕೆಎಪಿ) ಮುಖ್ಯಸ್ಥ ಅಲ್ತಾಫ್ ಬುಖಾರಿ, ಪೀಪಲ್ಸ್ ಕಾನ್ಫರೆನ್ಸ್‌ನ ಸಜ್ಜಾದ್ ಲೋನ್, ಜೆಕೆ ಕಾಂಗ್ರೆಸ್ ಮುಖ್ಯಸ್ಥ ಜಿಎ ಮಿರ್, ಬಿಜೆಪಿಯ ರವಿಡ್ನರ್ ರೈನಾ ಮತ್ತು ಪ್ಯಾಂಥರ್ಸ್ ಪಕ್ಷದ ಮುಖಂಡ ಭೀಮ್ ಸಿಂಗ್ ಅವರಿಗೆ ಆಹ್ವಾನ ಕಳುಹಿಸಿರುವುದಾಗಿ ಹೇಳಲಾಗಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net