

ನವದೆಹಲಿ: ದೇಶದಲ್ಲಿ ಕೋವಿಡ್–19 ಪರಿಸ್ಥಿತಿ ಹೇಗಿದೆ ಎಂದು ಅವಲೋಕಿಸಲು ಪ್ರಧಾನಿ ಮೋದಿ ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ಸಂದರ್ಭ, ಜನತೆ ಕೋವಿಡ್ ಕುರಿತು ಅನಗತ್ಯ ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಈ ಸಂದರ್ಭ ಮಾತನಾಡಿದ ಪ್ರಧಾನಿ, ಮಾಸ್ಕ್ ಧರಿಸುವಿಕೆ ಕಡ್ಡಾಯವಲ್ಲ. ಆದರೆ ಮಾಸ್ಕ್ ಧರಿಸಿ, ಕೋವಿಡ್ ಮುನ್ನೆಚ್ಚರಿಕೆ ಪಾಲಿಸಿ ಎಂದಿದ್ದಾರೆ. ಕೋವಿಡ್ ಪತ್ತೆ ಪರೀಕ್ಷೆ ಹೆಚ್ಚಿಸಲು ಈ ಸಭೆಯಲ್ಲಿ ಮೋದಿ ಹೇಳಿದ್ದಾರೆ.
ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ, ಗೃಹ ಸಚಿವ ಅಮಿತ್ ಶಾ, ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗಳು ಸಭೆಯಲ್ಲಿ ಕೋವಿಡ್ ಸ್ಥಿತಿಗತಿ ಮತ್ತು ಸಿದ್ಧತೆ ಕುರಿತು ವಿಸ್ತೃತವಾಗಿ ವಿವರಿಸಿದ್ದಾರೆ.
ಚೀನಾದಲ್ಲಿ ಕೋವಿಡ್ ಏರಿಕೆಗೆ ಕಾರಣವಾಗಿರುವ ವೈರಸ್ ತಳಿ, ಭಾರತದ ನಾಲ್ವರಲ್ಲಿ ಪತ್ತೆಯಾದ ಬೆನ್ನಲ್ಲೇ ಕೋವಿಡ್ ಕುರಿತು ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ತಳಿಯ ವೈರಸ್್ ಪತ್ತೆಯಾಗಿದ್ದರೂ ಭಯಪಡುವ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದ್ದು ಸೋಂಕಿತ ನಾಲ್ವರೂ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದೆ.
ಆಕ್ಸಿಜನ್ ಸಿಲಿಂಡರ್ಗಳು, ಪಿಎಸ್ಎ ಪ್ಲಾಂಟ್ಗಳು, ವೆಂಟಿಲೇಟರ್ಗಳು ಮತ್ತು ಅಗತ್ಯ ಸಂಪನ್ಮೂಲಗಳು ಸೇರಿದಂತೆ ಆಸ್ಪತ್ರೆಯ ಮೂಲಸೌಕರ್ಯಗಳೊಂದಿಗೆ ಆಸ್ಪತ್ರೆ ಸಿದ್ಧವಾಗಿ ಇರುವುದನ್ನು ರಾಜ್ಯಗಳು ಖಚಿತಪಡಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಸಭೆಯಲ್ಲಿ ಸಲಹೆ ನೀಡಿದ್ದಾರೆ.