ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ಗ್ರೀನ್​ ಸಿಗ್ನಲ್​​

rahul gandhi
Published on

ದೆಹಲಿ: 'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸುವುದನ್ನು ತಡೆಯುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಹಿರಿಯ ವಕೀಲ ಡಾ.ಎ.ಎಂ.ಸಿಂಘ್ವಿ ರಾಹುಲ್​ ಗಾಂಧಿ ಪರವಾಗಿ ಅರ್ಜಿ ಸಲ್ಲಿಸಿದ್ದು, ಶುಕ್ರವಾರದಂದು ಶಿಕ್ಷೆಗೆ ತಡೆ ಕೋರಿ ಗಾಂಧಿ ಸಲ್ಲಿಸಿರುವ ಮನವಿ ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: ಮಗನ ಕಾಲೇಜು ಶುಲ್ಕಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ತಾಯಿ

ಈ ಹಿಂದೆ ಗುಜರಾತ್ ಹೈಕೋರ್ಟ್, ರಾಹುಲ್ ಗಾಂಧಿಯ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿ ಅಪರಾಧಿಯ ಶಿಕ್ಷೆಯನ್ನು ತಡೆಯಲು ಯಾವುದೇ ಸಮಂಜಸವಾದ ಕಾರಣವಿಲ್ಲ. ವಿಚಾರಣಾ ನ್ಯಾಯಾಲಯದ ಆದೇಶವು ನ್ಯಾಯಯುತ ಮತ್ತು ಕಾನೂನುಬದ್ಧವಾಗಿದೆ. ಈ ಆದೇಶದಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ. ಅನರ್ಹತೆಯು ಕೇವಲ ಸಂಸದರು ಮತ್ತು ಶಾಸಕರಿಗೆ ಸೀಮಿತವಾಗಿಲ್ಲ ಎಂದು ಹೈಕೋರ್ಟ್ ಪೀಠ ಹೇಳಿತ್ತು.

ಬಳಿಕ ಈ ಕುರಿತಾಗಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಕಾಂಗ್ರೆಸ್ ಪಕ್ಷ ಹೇಳಿಕೊಂಡಿತ್ತು. ಅದರಂತೇ ರಾಹುಲ್​ ಅರ್ಜಿ ಸಲ್ಲಿಸಿದ್ದು ಈ ತೀರ್ಪಿಗೆ ತಡೆ ನೀಡದಿದ್ದಲ್ಲಿ ವಾಕ್, ಅಭಿವ್ಯಕ್ತಿ, ಚಿಂತನೆ ಮತ್ತು ಹೇಳಿಕೆಗಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೋಜಿಗಾಗಿ ವಿದ್ಯಾರ್ಥಿನಿಯರಿಗೆ ಪದೇ ಪದೇ ವಿದ್ಯುತ್ ಶಾಕ್ ನೀಡಿದ ಎಲೆಕ್ಟ್ರಿಷಿಯನ್…

2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ನಡೆದ ಭಾಷಣದ ವೇಳೆ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯನ್ನು ಸಲ್ಲಿಸಿದ್ದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net