More

    ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ ಸೂರತ್ ನ್ಯಾಯಾಲಯ

    ನವದೆಹಲಿ: ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ದಾಖಲಾಗಿದ್ದ ಮಾನನಷ್ಟ ಪ್ರಕರಣದಲ್ಲಿ ರಾಹುಲ್​ರನ್ನು ದೋಷಿ ಎಂದು ಗುಜರಾತಿನ ಸೂರತ್​ ನ್ಯಾಯಾಲಯ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ರಾಹುಲ್​ ಗಾಂಧಿ 30 ದಿನಗಳ ವರೆಗೆ ಜಾಮೀನು ಪಡೆದುಕೊಂಡಿದ್ದು, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಿದ್ದಾರೆ.

    ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಲಾಗಿದ್ದು, ಈ ಸೆಕ್ಷನ್ ಅಡಿಯಲ್ಲಿ ಗರಿಷ್ಠ ಸಂಭವನೀಯ ಶಿಕ್ಷೆ ಎರಡು ವರ್ಷಗಳಾಗಿದೆ. ಇದೀಗ ಜಾಮೀನು ಪಡೆದಿರುವುದರಿಂದ ಜೈಲು ಶಿಕ್ಷೆಯಿಂದ ರಾಹುಲ್​ ಪಾರಾಗಲಿದ್ದಾರೆ.

    ಇದನ್ನೂ ಓದಿ: ಲೇಡಿಸ್​ ಹಾಸ್ಟೆಲ್​ ಮುಂದೆ ಆಟೋ ನಿಲ್ಲಿಸಿ ಖಾಸಗಿ ಅಂಗ ಪ್ರದರ್ಶಿಸಿದ ಚಾಲಕನಿಗೆ ಕಾದಿತ್ತು ಬಿಗ್​ ಶಾಕ್​!

    ಏನಿದು ಪ್ರಕರಣ?
    2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡ್ತಿದ್ದ ರಾಹುಲ್ ಗಾಂಧಿ, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

    ರಾಹುಲ್​ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ನ್ಯಾಯಾಲಯ ರಾಹುಲ್​ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. (ಏಜೆನ್ಸೀಸ್​)

    ಬಿಯರ್ ಮೇಲೆ 10 ರೂ. ಹೆಚ್ಚುವರಿ ವಸೂಲಿ ಮಾಡಿದ್ದವನಿಗೆ ಜೈಲು; ಬಾರ್ ಲೈಸೆನ್ಸ್ ಹೊಂದಿದ್ದ ಮಾಲೀಕನಿಗೆ 75,000 ರೂ. ದಂಡ

    ಬೆಡ್‌ರೂಂನಲ್ಲಿ ಮಲಗಿ ಬುಸುಗುಟ್ಟಿದ 6 ಅಡಿ ಉದ್ದ ವಿಷಕಾರಿ ಹಾವು!

    ಶಿವಸೇನೆ ನಾಯಕಿಯಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಅಪಮಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts