ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.45 ಕ್ಕೆ ಕರೊನಾ ಪರಿಸ್ಥಿತಿಯ ಬಗ್ಗೆ ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ದೇಶಾದ್ಯಂತ ಎರಡನೇ ಅಲೆ ಎದ್ದು, ಆರೋಗ್ಯ ವ್ಯವಸ್ಥೆಯ ಪರಿಸ್ಥಿತಿ ಬಿಗಡಾಯಿಸುತ್ತಿರುವ ವರದಿಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮೋದಿ ಆಡಲಿರುವ ಮಾತುಗಳ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ.