20.4 C
Bangalore
Monday, December 9, 2019

2022ರ ವೇಳೆಗೆ ದೇಶದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವಂತೆ ಜನತೆಗೆ ಮೋದಿ ಕರೆ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ನವದೆಹಲಿ: ದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವ್ಯಾಪಕ ಅವಕಾಶಗಳಿವೆ. ನಮ್ಮಲ್ಲಿ ಸಾಕಷ್ಟು ಪ್ರವಾಸಿ ಸ್ಥಳಗಳಿದ್ದು, ಜನರು 2022ರ ವೇಳೆಗೆ ಕನಿಷ್ಠ ದೇಶದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಮೋದಿ, ದೇಶದಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿಯಾದರೆ ವಿದೇಶಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ. ನಮ್ಮ ದೇಶದಿಂದ ಲಕ್ಷಾಂತರ ಜನರು ಪ್ರವಾಸಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ. ಆದರೆ ಅವರಲ್ಲಿ ಸಾಕಷ್ಟು ಜನರು ನಮ್ಮಲ್ಲೇ ಇರುವ ಹಲವು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿರುವುದೇ ಇಲ್ಲ.

ಹಾಗಾಗಿ 2022 ರಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಗೆ ವೇಳೆಗೆ ದೇಶದಲ್ಲಿರುವ 15 ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ಸಂಕಲ್ಪ ಮಾಡೋಣ. ಕೆಲವೊಂದು ಸ್ಥಳಗಳಲ್ಲಿ ಉಳಿದುಕೊಳ್ಳಲು ಹೋಟೆಲ್​ ಮತ್ತು ಮೂಲಸೌಕರ್ಯ ಇಲ್ಲದಿರಬಹುದು, ಆದರೆ ನೀವು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ಭೇಟಿ ನೀಡಿದರೆ ಅಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ತನ್ನಿಂದ ತಾನೇ ಆಗುತ್ತದೆ. ಆ ನಂತರ ಅದು ಪ್ರಮುಖ ಪ್ರವಾಸಿ ಸ್ಥಳವಾಗಿ ಅಭಿವೃದ್ಧಿ ಹೊಂದುತ್ತದೆ. ಈ ಮೂಲಕ ನೀವು ದೇಶದಲ್ಲಿ ಪ್ರವಾಸಿ ಸ್ಥಳಗಳನ್ನು ಮತ್ತು ಪ್ರವಾಸೋದ್ಯಮಕ್ಕೆ ಅಭಿವೃದ್ಧಿಪಡಿಸಲು ನೆರವಾಗಬಹುದು ಎಂದು ತಿಳಿಸಿದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...