ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ; ಮೆಡಿಕಲ್ ಕಾಲೇಜು ಲೋಕಾರ್ಪಣೆ

modi
Published on

ಚಿಕ್ಕಬಳ್ಳಾಪುರ: ಸತ್ಯ ಸಾಯಿ ಗ್ರಾಮಕ್ಕೆ‌ ಬಂದಿರುವ ಪ್ರಧಾನಿ ಮೊದಿ ಇದೀಗ ಮುದ್ದೇನ ಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯ ಸಮಾಧಿ ಹಾಗೂ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮಿಸಿದ್ದಾರೆ. ಹೆಲಿಪ್ಯಾಡ್ ನಿಂದ ಮುದ್ದೇನಹಳ್ಳಿಗೆ ಆಗಮಿಸಿದ ಮೋದಿಗೆ ಸಿಎಂ ಬೊಮ್ಮಾಯಿ, ಸಂಸದ ಬಚ್ಚೇಗೌಡ, ಸಚಿವ ಸುಧಾಕರ್ ಗೆ ಹೂಗುಚ್ಚ ನೀಡಿ ಸ್ವಾಗತಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಹೋಬಳಿಯ ಮುದ್ದೇನಹಳ್ಳಿಗೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳ, ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ವಿಶ್ವೇಶ್ವರಯ್ಯನವರ ಮನೆ/ಮ್ಯೂಸಿಯಂಗೆ ಭೇಟಿ ನೀಡಿದರು. ಅದಾದ ಮೇಲೆ ಪ್ರಧಾನಿ ಮೋದಿಯವರು ಮಧುಸೂದನ ಸಾಯಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ಮಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net