More

    ದೇಶಕ್ಕಾಗಿ 18 ಗಂಟೆ ಕೆಲಸ ಮಾಡುವ ಮೋದಿ

    ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಪ್ಪಟ ದೇಶಭಕ್ತರಾಗಿದ್ದು, ದೇಶಕ್ಕಾಗಿ ದಿನದ 18 ಗಂಟೆ ನಿರಂತರ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.


    ಶನಿವಾರ ರಾತ್ರಿ ಗದಗ ತಾಲೂಕಿನ ಮಲ್ಲಸಂದ್ರ, ಬಿಂಕದಕಟ್ಟೆ, ಅಂತೂರು- ಬೆಂತೂರು, ಹೊಸಳ್ಳಿ, ನೀಲಗುಂದ ಹಾಗೂ ಚಿಂಚಲಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಅವರು ಮಾತನಾಡಿದರು.


    ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದು, ಪ್ರಧಾನಿ ಮೋದಿಯವರು ಬಲಿಷ್ಠ ನಾಯಕರಾಗಿದ್ದಾರೆ. ಮೋದಿ ಅವರು ತಮ್ಮ ತಾಯಿ ನಿಧನ ಹೊಂದಿದಾಗ ಕೇವಲ ಮೂರು ಗಂಟೆಯಲ್ಲಿ ಅಂತ್ಯಕ್ರಿಯೆ ನೆರವೇರಿಸಿ, ಕರ್ತವ್ಯಕ್ಕೆ ಹಾಜರಾದ ಅಪ್ಪಟ ದೇಶಪ್ರೇಮಿಯಾಗಿದ್ದಾರೆ ಎಂದರು.
    ನಮ್ಮ ದೇಶ ಅತ್ಯಂತ ಬಲಿಷ್ಠವಾಗಿದ್ದು, ವಿದೇಶಗಳಿಗೆ ನಾವು ಭಿಕ್ಷೆ ಬೇಡುವವರಲ್ಲ, ದಾನ ಕೊಡುವವರು ಎಂದು ತೋರಿಸಿಕೊಟ್ಟಿದ್ದಾರೆ ಎಂದರು.
    ದೇಶದಲ್ಲಿ ದುರ್ಬಲ ನಾಯಕರಿದ್ದಾಗ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತವೆ. ಬಲಿಷ್ಠ ಇದ್ದರೆ ಎಲ್ಲರೂ ಹೆದರುತ್ತಾರೆ. ಮೋದಿಯವರು ರಷ್ಯಾ ಯುದ್ಧ ನಿಲ್ಲಿಸಿ ನಮ್ಮ ದೇಶದ 24 ಮಕ್ಕಳನ್ನು ರಕ್ಷಣೆ ಮಾಡಿ ಕರೆತಂದರು ಎಂದರು.


    ಸಾಮಾಜಿಕವಾಗಿಯೂ ಮೋದಿಯವರು ಕೆಲಸ ಮಾಡಿದ್ದಾರೆ. ಎಲ್ಲರಿಗೂ ಉಚಿತ ಅಕ್ಕಿ ಕೊಟ್ಟರು. ಕೋವಿಡ್ ಸಂದರ್ಭದಲ್ಲಿ ಉಚಿತ ಲಸಿಕೆ ಹಾಕಿಸಿದರು. ನಮ್ಮ ದೇಶದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮೋದಿಯವರು ನಾಲ್ಕು ಕೋಟಿ ಮನೆ ಕಟ್ಟಿಸಿದ್ದಾರೆ. ದೇಶದಲ್ಲಿ ನೂರು ಕೋಟಿ ಮನೆಗಳಿವೆ. ಎಲ್ಲ ಮನೆಗಳಿಗೂ ಜಲ ಜೀವನ ಮಿಷನ್ ಮೂಲಕ ನಲ್ಲಿ ಸಂಪರ್ಕ ನೀಡಿದ್ದಾರೆ ಎಂದರು.

    ಹದಗೆಟ್ಟ ರಾಜ್ಯದ ಆರ್ಥಿಕ ಪರಿಸ್ಥಿತಿ
    ಕಾಂಗ್ರೆಸ್ ಅವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆಡಳಿತ ಪಕ್ಷದ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ಹಣ ಇಲ್ಲ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಸುಮಾರು 1100 ಕೋಟಿ ರೂ. ಬಾಕಿ ಕೊಡಬೇಕಿದೆ. ಇದೊಂದು ರೈತ ವಿರೋಧಿ ಸರ್ಕಾರ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಜನರ ತೆರಿಗೆಯಿಂದ ಗ್ಯಾರಂಟಿ ನೀಡಿದ್ದಾರೆ. ಅಲ್ಲದೆ, ಈ ವರ್ಷ ಒಂದು ಲಕ್ಷ ಐದು ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ. ಪ್ರತಿಯೊಬ್ಬರ ತಲೆಯ ಮೇಲೆ ಐವತ್ತು ಸಾವಿರ ರೂ. ಸಾಲ ಹೇರಿದ್ದಾರೆ ಎಂದು ಆರೋಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts