More

    ಮೋದಿ ಭರವಸೆ ಮಾಯಾಪೆಟ್ಟಿ ರೀತಿ : ದೇವನೂರು ಮಹಾದೇವ ವ್ಯಂಗ್ಯ

    ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳುತ್ತಿರುವ ವಿಕಸಿತ ಭಾರತದ ಪರಿಕಲ್ಪನೆ ಜಾತ್ರೆ ವೇಳೆ ಮಾಯಾಪೆಟ್ಟಿಯಲ್ಲಿ ಬಾಂಬೆ ನೋಡು, ಕೋಲ್ಕತಾ ನೋಡು, ಮದ್ರಾಸ್ ನೋಡು ಎಂಬ ಚಿತ್ರ ತೋರಿಸಿದಂತಿದೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಲೇವಡಿ ಮಾಡಿದರು.

    ಪ್ರಗತಿಪರ ಸಂಘಟನೆಗಳು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೊರತಂದಿರುವ ಕರಪತ್ರವನ್ನು ಗುರುವಾರ ನಗರದ ಪತ್ರಕರ್ತರ ಭವನದಲ್ಲಿ ಬಿಡುಗಡೆ ಮಾಡಿ ಮಾತನಾಡಿ, ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿಗೆ ರೈತರ ಆರ್ತನಾದ ಕೇಳಿಸಿಲ್ಲ, ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸಿಲ್ಲ. ಸರ್ಕಾರದ ರೈತ ವಿರೋಧಿ ನಿಲುವಿನಿಂದ ರೈತರು ಜಮೀನು ಮಾರಿ ನಗರಗಳಿಗೆ ಕೂಲಿ ಕೆಲಸಕ್ಕಾಗಿ ಗುಳೇ ಬರುವ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ದೇಶದಲ್ಲಿ ರೈತರ ಆದಾಯ ಕುಸಿಯುತ್ತಿದೆ. ಮತ್ತೊಂದೆಡೆ ಮೋದಿ ಪರಮಾಪ್ತರ ಆಸ್ತಿ ಮೌಲ್ಯ ಏರುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸುವ ಭರವಸೆ ನೀಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭರವಸೆ ಈಡೇರಿಸಿ ರೈತರ ಬದುಕು ಉತ್ತಮಗೊಳಿಸಬೇಕು ಎಂದರು.

    ಈ ಬಾರಿಯ ಚುನಾವಣೆಯಲ್ಲಿ ಸಭ್ಯರಾದ ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ರಾಜಕೀಯಕ್ಕೆ ತಳ್ಳಿರುವುದನ್ನು ನೋಡಿದಾಗ ಸಂಕಟವಾಗುತ್ತದೆ. ಯದುವೀರ್ ಹಾಗೂ ಡಾ.ಸಿ.ಎನ್. ಮಂಜುನಾಥ್ ಹಿಂದುತ್ವದ ಖೆಡ್ಡಾಕ್ಕೆ ಬೀಳಬಾರದಾಗಿತ್ತು. ಹೀಗಾಗಿ ಇವರು ಸೋತಾದರೂ ಈ ಖೆಡ್ಡಾದಿಂದ ಹೊರ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವ್ಯಂಗ್ಯವಾಡಿದರು.

    ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಚಾಮರಸ ಮಾಲಿ ಪಾಟೀಲ್, ಹೊಸೂರು ಕುಮಾರ್, ರವಿಕಿರಣ್, ವಿಜೇಂದ್ರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts