ನವದೆಹಲಿ: ಇಂಗ್ಲೆಂಡ್ ತಂಡದ ಸ್ಟಾರ್ ಆಲ್ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಟೆಸ್ಟ್ ಮಾದರಿಗೆ ನಿವೃತ್ತಿ ಘೋಷಿಸಿದ್ದ, ಮೊಯಿನ್ ಇದೀಗ ಏಕದಿನ ಹಾಗೂ ಟಿ20 ಕ್ರಿಕೆಟ್ಗೂ ನಿವೃತ್ತಿ ಘೋಷಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಕೆಲ ದಿನಗಳ ಹಿಂದಷ್ಟೇ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿತ್ತು. ಈ ಸರಣಿಯಲ್ಲಿ ಮೊಯಿನ್ ಅಲಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಈ ಸರಣಿಯಿಂದ ಡೇವಿಡ್ ಮಲಾನ್, ಜೋ ರೂಟ್ ಅವರಿಗೂ ಕೊಕ್ ನೀಡಲಾಗಿತ್ತು. ಇದರ ಬೆನ್ನಲ್ಲೇ ಮಲಾನ್ ನಿವೃತ್ತಿ ಘೋಷಿಸಿದ್ದರು. ಇದೀಗ ಮೊಯೀನ್ ಅಲಿ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಇದನ್ನೂ ಓದಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್; ಜಾವೆಲಿನ್ ಥ್ರೋನಲ್ಲಿ ಸ್ವರ್ಣ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್
ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಮುಂಬರುವ ಚಾಂಪಿಯನ್ಸ್ ಟ್ರೋಫಿ, ಟಿ20 ವಿಶ್ವಕಪ್ ಸೇರಿದಂತೆ ಮುಂಬರುವ ಟೂರ್ನಿಗಳನ್ನು ಗಮನದಲ್ಲಿರಿಸಿಕೊಂಡು ಹೊಸ ತಂಡವನ್ನು ಕಟ್ಟುವ ಯೋಜನೆ ರೂಪಿಸಿಕೊಂಡಿದೆ. ಹೀಗಾಗಿಯೇ ಹಿರಿಯ ಆಟಗಾರರನ್ನು ಆಸ್ಟ್ರೇಲಿಯಾ ಸರಣಿಯಿಂದ ಕೈ ಬಿಡಲಾಗಿದೆ. ಇತ್ತ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಮೊಯಿನ್ ನಿವೃತ್ತಿ ಘೋಷಿಸಿದ್ದಾರೆ.
2014ರಲ್ಲಿ ಇಂಗ್ಲೆಂಡ್ ಪರ ಪದಾರ್ಪಣೆ ಮಾಡಿದ ಮೊಯಿನ್ 68 ಟೆಸ್ಸ್, 138 ಏಕದಿನ, 92 ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ನಲ್ಲಿ 3094 ರನ್ ಕಲೆಹಾಕಿರುವ ಮೊಯಿನ್ 204 ವಿಕೆಟ್ಗಳನ್ನು ಕಬಳಿಸಿದ್ದಾರೆ. ಏಕದಿನದಲ್ಲಿ 2355 ರನ್ ಹಾಗೂ 111 ವಿಕೆಟ್ ಪಡೆದಿದ್ದಾರೆ. ಟಿ20 ಕ್ರಿಕೆಟ್ನಲ್ಲಿ 1229 ರನ್ ಹಾಗೂ 51 ವಿಕೆಟ್ಗಳನ್ನು ಮೊಯಿನ್ ಕಬಳಿಸಿದ್ದಾರೆ.