17.8 C
Bengaluru
Wednesday, January 22, 2020

ಮೊಗಪ್ಪೆ ಕೆರೆಗೆ ಬೇಕು ಕಾಯಕಲ್ಪ

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ಬಾಲಚಂದ್ರ ಕೋಟೆ ಬೆಳ್ಳಾರೆ
ಮೊಗೆದರೆ ಬಗೆದಷ್ಟೂ ನೀರು ಚಿಮ್ಮುವ ಸುಳ್ಯ ತಾಲೂಕಿನ ಮೊಗಪ್ಪೆ ಕೆರೆಯಲ್ಲಿ ಪ್ರಸಕ್ತ ವರ್ಷ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆ. ಕೆರೆ ಹೂಳೆತ್ತುವ ಕಾರ್ಯ ಎರಡು ವರ್ಷಗಳಿಂದ ನಡೆಯದಿರುವುದರಿಂದ ಕೆರೆ ಬತ್ತುತ್ತಿದೆ.
ಬೆಳ್ಳಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಟಾರಿನಲ್ಲಿರುವ ಮೊಗಪ್ಪೆ ಕೆರೆಗೆ ಶತಮಾನದ ಇತಿಹಾಸವಿದೆ. ಪಂಚಾಯಿತಿ ದಾಖಲೆಗಳಲ್ಲಿ ಕೆರೆ ಪ್ರದೇಶ 10.02 ಎಕರೆ ವ್ಯಾಪಿಸಿದೆ. ನೆಟ್ಟಾರು, ಬೆಳ್ಳಾರೆ, ಪೆರುವಾಜೆ ಗ್ರಾಮದ ಜಲಸಂಜೀವಿನಿಯಾದ ಮೊಗಪ್ಪೆ ಕೆರೆ ಸಂರಕ್ಷಣೆಯ ಊರವರ ಕಾರ್ಯ ಬಹುಮಟ್ಟಿಗೆ ಸಫಲವಾದರೂ ಅನುದಾನ ಕೊರತೆಯಿಂದ ಎರಡು ವರ್ಷಗಳಿಂದ ಹೂಳೆತ್ತುವ ಕಾರ್ಯ ನಡೆದಿಲ್ಲ.

ಊರವರಿಂದ ಅಭಿವೃದ್ಧಿ: ಎರಡು ವರ್ಷಗಳ ಹಿಂದೆ ಸಂಘ-ಸಂಸ್ಥೆಗಳು, ದಾನಿಗಳು ಈ ಕೆರೆಯ ಹೂಳೆತ್ತುವ ಕಾರ್ಯದ ನಿರ್ಧಾರ ಸ್ವತಃ ತಾವೇ ತೆಗೆದುಕೊಂಡರು. ಮೊಗಪ್ಪೆ ಕೆರೆ ಅಭಿವೃದ್ಧಿ ಸಮಿತಿ ರಚಿಸಿ ಸ್ವಯಂಪ್ರೇರಿತವಾಗಿ ಕೆರೆ ಅಭಿವೃದ್ಧಿಗೋಸ್ಕರ ಶ್ರಮಿಸಿದರು. ಸಮಿತಿ ವತಿಯಿಂದ 10 ಲಕ್ಷ ರೂ. ಸಂಗ್ರಹಿಸಿ ಕೆರೆ ಅಭಿವೃದ್ಧಿ ಮಾಡಲಾಗಿತ್ತು. ಹೂಳೆತ್ತಲು ಜನರು ಕೂಡ ಆರ್ಥಿಕ ಸಹಕಾರ ನೀಡಿದ್ದರು. ಇದರಿಂದ ಹತ್ತಾರು ಅಡಿಗಳಷ್ಟು ಮಣ್ಣು ತೆಗೆದು ಹೂಳೆತ್ತಿದ ಅನಂತರ ನೈಜ ಕೆರೆಯ ಸ್ವರೂಪ ಪಡೆದುಕೊಂಡು ನೀರು ನಿಂತಿತ್ತು.
ಮೊಗಪ್ಪೆ ಕೆರೆಯಲ್ಲಿ ಜಲ ಇಂಗಿಸುವ, ಸುಂದರ ಪ್ರವಾಸಿ ತಾಣವಾಗಿಸುವ, ಹತ್ತೂರಿಗೆ ನೀರು ಹರಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಊರವರೇ ಮುಂದಾಗಿದ್ದರು. ಆರು ಎಕರೆಯಷ್ಟು ಪ್ರದೇಶದಲ್ಲಿ ಇದೇ ಮಟ್ಟದ ಆಳದಲ್ಲಿ ಕೆರೆಯ ಹೂಳೆತ್ತಿದರೆ ಸುಡು ಬೇಸಿಗೆಯಲ್ಲೂ ಈ ಕೆರೆಯಲ್ಲಿ ನೀರು ಬತ್ತದು.

ಅನುದಾನ ನಿರೀಕ್ಷೆ: ಬೆಳ್ಳಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಈ ಸರ್ಕಾರಿ ಕೆರೆ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಲಭಿಸಿದರೆ ಸುತ್ತಲೂ ಹಣ್ಣಿನ ಗಿಡಗಳು, ಪಾರ್ಕ್, ತೂಗುಸೇತುವೆ ನಿರ್ಮಿಸುವ ಚಿಂತನೆ ಮೊಗಪ್ಪೆ ಕೆರೆ ಅಭಿವೃದ್ಧಿ ಸಮಿತಿಗಿದೆ. ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಕೆರೆ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭ ಈ ಯೋಜನೆಗಳಿಗೆ ಬೆಂಬಲ ನೀಡುವ ಭರವಸೆ ನೀಡಿದ್ದರು. ಆದರೆ ಯಾವುದೂ ಈಡೇರಿಲ್ಲ.

ಉದ್ಯೋಗ ಖಾತ್ರಿ ಯೋಜನೆಯಡಿ ಹೂಳೆತ್ತುವ ಯೋಜನೆ ರೂಪಿಸಿದ್ದೇವೆ. ಕೆರೆ ಅಭಿವೃದ್ಧಿ ಮಾಡಲು ಸರ್ಕಾರಕ್ಕೆ ಪಂಚಾಯಿತಿ ವತಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯ ಮೊಗಪ್ಪೆ ಕೆರೆ ಹೂಳೆತ್ತಿ, ನೆಟ್ಟಾರು ಭಾಗದ ಜನತೆಗೆ ಕುಡಿಯುವ ನೀರಿನ ಲಭ್ಯತೆಗೆ ಯೋಚಿಸಲಾಗಿದೆ.
ಶಕುಂತಳಾ ನಾಗರಾಜ್,  ಅಧ್ಯಕ್ಷೆ, ಬೆಳ್ಳಾರೆ ಗ್ರಾಮ ಪಂಚಾಯಿತಿ

ಕೆರೆ ಅಭಿವೃದ್ಧಿ ಸಮಿತಿಯ ರೂಪುರೇಷೆಯಂತೆ ಮೊಗಪ್ಪೆ ಕೆರೆ ಅಭಿವೃದ್ಧಿ ಕಾಮಗಾರಿಗಳು ನಡೆಯಲಿ. ಹತ್ತೂರಿಗೆ ನೀರು ಹಾಯಿಸಲು ಹಾಗೂ ಅದ್ಭುತ ಪ್ರವಾಸಿ ತಾಣವಾಗಿಸುವ ಸಲುವಾಗಿ ಸರ್ಕಾರದ ಅನುದಾನ ತರಿಸುವ ಪ್ರಯತ್ನ ಮಾಡಲಾಗುವುದು.
ಬಿ.ಸುಬ್ರಹ್ಮಣ್ಯ ಜೋಶಿ,  ಪ್ರಧಾನ ಕಾರ್ಯದರ್ಶಿ, ಕೆರೆ ಅಭಿವೃದ್ಧಿ ಸಮಿತಿ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...