ರಸ್ತೆಗಿಳಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ನಲಪಾಡ್​! ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಕರೊನಾ ಸೋಂಕನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಲಾಕ್​ಡೌನ್​ ವಿಸ್ತರಣೆ ಮಾಡಲಾಗಿದೆ. ಆದರೆ ಕಾಂಗ್ರೆಸ್​ ಯುವ ನಾಯಕ ಮೊಹಮ್ಮದ್ ನಲಪಾಡ್ ಲಾಕ್​ಡೌನ್​ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಅವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರದಂದು ಬೆಂಗಳೂರಿನ ಓಪೆರಾ ಜಂಕ್ಷನ್‌ ಬಳಿ ಸೇರಿದ ಮೊಹಮ್ಮದ್​ ನಲಪಾಡ್​ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ರಸ್ತೆಯಲ್ಲಿ ನಿಂತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾರಂಭಿಸಿದ್ದಾರೆ. ಈ ವೇಳೆ ಅಶೋಕ ನಗರ ಪೊಲೀಸರು ಸ್ಥಳಕ್ಕೆ ಬಂದಿದ್ದು, … Continue reading ರಸ್ತೆಗಿಳಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ನಲಪಾಡ್​! ವಶಕ್ಕೆ ಪಡೆದ ಪೊಲೀಸರು