ಕೊಹ್ಲಿಯ ದಾಖಲೆಯನ್ನೇ ಹಿಂದಿಕ್ಕಿದ ಶಮಿ; ಯಾವುದು ಆ ದಾಖಲೆ?

#ViratKohli
Published on

ನಾಗ್ಪುರ: ಟೀಂ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಆಸ್ಟ್ರೇಲಿಯಾ ನಡುವಣ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಮೊಹಮ್ಮದ್ ಶಮಿ 37ರನ್ ಗಳಿಸಿದರು. ಈ ವೇಳೆ ಭರ್ಜರಿ ಮೂರು ಸಿಕ್ಸರ್ ಸಿಡಿಸಿ ಮಿಂಚಿದರು. ಈ ಮೂಲಕ ಭಾರತದ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರೊಂದಿಗೆ ಸ್ಟಾರ್ ಬ್ಯಾಟ್ಸ್​ಮನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ ಒಟ್ಟು 25 ಸಿಕ್ಸರ್ ಸಿಡಿಸಿದ್ದರೆ. ಕೊಹ್ಲಿ 24 ಸಿಕ್ಸರ್ ಸಿಡಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಕ್ರಮವಾಗಿ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ 21 ಹಾಗೂ, ಹಾಲಿ ಉಪನಾಯಕ ಕೆ.ಎಲ್.ರಾಹುಲ್ 17 ಸಿಕ್ಸರ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಸಹಿತ 132ರನ್​ಗಳ ಗೆಲವು ದಾಖಲಿಸಿಕೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 223 ರನ್‌ಗಳ ಮುನ್ನಡೆ ಸಾಧಿಸಿದ ಭಾರತ, ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್​​ನಲ್ಲಿ ಆಸ್ಟ್ರೇಲಿಯಾವನ್ನು ಕೇವಲ 91 ರನ್‌ಗಳಿಗೆ ಆಲ್​ಔಟ್ ಮಾಡುವಲ್ಲಿ ಯಶಸ್ವಿಯಾಯಿತು. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಪಡೆ 4 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net