More

    ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನ್ ಮಾಝಿ ಆಯ್ಕೆ: ನಾಳೆ ಪ್ರಮಾಣ ವಚನ

    ಭುವನೇಶ್ವರ್​: ಒಡಿಶಾ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮೋಹನ್​ ಚರಣ್​ ಮಾಝಿ ಅವರು ಆಯ್ಕೆಯಾಗಿದ್ದಾರೆ. ನಾಳೆ ಜೂನ್ 12 ರಂದು ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸಲಿದೆ.

    ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ

    ನಾಳೆ (ಜೂ.12) ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಝಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘೋಷಿಸಿದ್ದಾರೆ. ಮೋಹನ್ ಚರಣ್ ಮಾಝಿ ಕಿಯೋಂಜಾರ್ ವಿಧಾನಸಭಾ ಕ್ಷೇತ್ರದಿಂದ ಬಿಜು ಜನತಾ ದಳದ ಮಿನಾ ಮಾಝಿ ಅವರನ್ನು 11,577 ಮತಗಳಿಂದ ಸೋಲಿಸಿದರು.

    ಮೋಹನ್ ಚರಣ್ ಮಾಝಿ 2019 ರ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಕಿಯೋಂಜಾರ್‌ನಿಂದ ಒಡಿಶಾ ವಿಧಾನಸಭೆಗೆ ಬಿಜೆಪಿ ಶಾಸಕನಾಗಿ ಆಯ್ಕೆಯಾದರು. ಅವರು 2000 ರಿಂದ 2009 ರ ಅವಧಿಯಲ್ಲಿ ಎರಡು ಬಾರಿ ಕಿಯೋಂಜಾರ್ ಅನ್ನು ಪ್ರತಿನಿಧಿಸಿದ್ದರು.

    24 ವರ್ಷಗಳ ಬಳಿಕ ಒಡಿಶಾಗೆ ಹೊಸ ಸಿಎಂ: ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಈ ಬಾರಿಯ ಚುನಾವಣೆಯಲ್ಲಿ ಸೋಲನ್ನಪ್ಪಿದ ನಂತರ ಒಡಿಶಾ ರಾಜ್ಯದ ಮುಖ್ಯಮಂತ್ರಿಯಾಗಿ 24 ವರ್ಷಗಳ ಅಧಿಕಾರಾವಧಿಯನ್ನು ಮುಕ್ತಾಯಗೊಳಿಸಿದ್ದಾರೆ. ಎರಡೂವರೆ ದಶಕಗಳ ನಂತರ ಇದೀಗ ಒಡಿಶಾದ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ.

    ಯಾರೆಲ್ಲಾ ಮುಂಚೂಣಿಯಲ್ಲಿ ಇದ್ದರು?: ಬಿಜೆಪಿ ಹಿರಿಯ ನಾಯಕ ಸುರೇಶ್‌ ಪೂಜಾರಿ, ಜಯನಾರಾಯಣ್‌ ಮಿಶ್ರಾ, ಲಕ್ಷ್ಮಣ್‌ ಬಾಗ್‌ ಹೆಸರುಗಳು ಚಾಲ್ತಿಗೆ ಬಂದಿತ್ತು. ಹೈಕಮಾಂಡ್‌ ಜತೆ ನಿಕಟ ಸಂಪರ್ಕದಲ್ಲಿರುವ ಮಾಜಿ ಸಂಸದ ಹಾಗೂ ಶಾಸಕ ಸುರೇಶ್‌ ಪೂಜಾರಿ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು. ಕಾಂತಾಬಾಂಜಿ ಕ್ಷೇತ್ರದಲ್ಲಿ ಮಾಜಿ ಸಿಎಂ ನವೀನ್‌ ಪಟ್ನಾಯಕ್‌ ಅವರಿಗೆ ಸೋಲುಣಿಸಿದ್ದ ಲಕ್ಷ್ಮಣ್‌ ಬಾಗ್‌ ಹೆಸರು ಸಹ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿದೆ.

    See also  ಪ್ರಯಾಸದಿಂದ ಟಿಕೆಟ್ ಪಡೆದ ಶಾಸಕ ಪರಣ್ಣ ಮುನವಳ್ಳಿ

    147 ಸದಸ್ಯ ಬಲದ ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತವನ್ನು ಪಡೆದುಕೊಂಡಿದೆ. 21 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನೂ ಗೆದ್ದುಕೊಳ್ಳುವ ಮೂಲಕ ಬಿಜೆಪಿ ರಾಜ್ಯದಲ್ಲಿ ಜಯಭೇರಿ ಬಾರಿಸಿದೆ.

    ವೈದ್ಯಕೀಯ ಪರೀಕ್ಷೆ ಹಿನ್ನೆಲೆ ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಗೆ ನಟ ದರ್ಶನ್ ಅಂಡ್​ ಗ್ಯಾಂಗ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts