More

    ಎಂಇಎಸ್ ಸಂಘಟನೆ ನಡೆಗೆ ಆಕ್ರೋಶ

    ಮೊಳಕಾಲ್ಮೂರು: ರಾಜ್ಯದ ಗಡಿ ವಿಚಾರದಲ್ಲಿ ಎಂಇಎಸ್ ಸಂಘಟನೆ ನಡೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

    ಬಸ್ ನಿಲ್ದಾಣದಿಂದ ತಾಲೂಕು ಕಚೇರಿಗೆ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು, ಎಂಇಎಸ್ ಸಂಘಟನೆ ವಿರುದ್ಧ ಘೋಷಣೆ ಕೂಗಿದರು.

    ಗಡಿ ವಿಚಾರ ಮುಂದಿಟ್ಟುಕೊಂಡು ಎಂಇಎಸ್ ಕಾರ್ಯಕರ್ತರು ಕನ್ನಡ ಧ್ವಜ ಸುಟ್ಟು ಹಾಕಿದ್ದಾರೆ. ಜತೆಗೆ ರಾಜ್ಯದ ಸಿಎಂ ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿದ್ದಾರೆ. ಕನ್ನಡ ಚಲನಚಿತ್ರ ಪ್ರದರ್ಶನ ನಿಲ್ಲಿಸಿ, ನಾಮಫಲಕಗಳಿಗೆ ಮಸಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವುದನ್ನು ನಾವು ಸಹಿಸುವುದಿಲ್ಲ ಎಂದು ತಿಳಿಸಿದರು.

    ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಕುಮ್ಮಕ್ಕು ನೀಡುತ್ತಿದ್ದು, ಇದು ಶೋಭೆ ತರುವಂತದ್ದಲ್ಲ. ಕೂಡಲೇ ಅವರು ಕ್ಷಮೆಯಾಚಿಸಬೇಕು. ಒಕ್ಕೂಟ ವ್ಯವಸ್ಥೆಯ ಮೂಲ ಉದ್ದೇಶಗಳನ್ನು ಬುಡಮೇಲು ಮಾಡಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡುವ ಕಾರ್ಯ ಕೈಬಿಡಬೇಕು ಎಂದು ಆಗ್ರಹಿಸಿದರು.

    ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆಗೆ ಹೋಗುವ ವೇಳೆ ತಮಿಳುನಾಡು ಪೊಲೀಸರು ದೌರ್ಜನ್ಯ ಎಸಗಿರುವುದು ತರವಲ್ಲ. ಈ ಕುರಿತು ಸಿಎಂ ಯಡಿಯೂರಪ್ಪ ಅವರು ಅಲ್ಲಿನ ಸರ್ಕಾರಕ್ಕೆ ಪತ್ರ ಬರೆದು ಎಚ್ಚರಿಸಬೇಕು ಎಂದು ಒತ್ತಾಯಿಸಿದರು.

    ಬಳಿಕ ಶಿರಸ್ತೇದಾರ್ ಅಂಜಿನಪ್ಪ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆ ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್.ಟಿ.ಮಂಜುನಾಥ, ಉಪಾಧ್ಯಕ್ಷ ಎಸ್.ಮಹೇಶ್, ಖಜಾಂಚಿ ಬಿ.ಮಾರಣ್ಣ, ಜಿ.ಪ್ರಶಾಂತ, ಲಕ್ಷ್ಮಣ, ಸಿ.ಅಭಿಷೇಕ್, ಟಿ.ರಮೇಶ್, ಬಿ.ಸ್ವಾಮಿ, ಮಂಜುನಾಥ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts