More

    ಮೊಳಕಾಲ್ಮೂರು ಪಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಳಂಬ

    ಕೆ.ಕೆಂಚಪ್ಪ ಮೊಳಕಾಲ್ಮೂರು: ಪಟ್ಟಣ ಪಂಚಾಯಿತಿ ಚುನಾವಣೆ ನಡೆದು ವರ್ಷ ಕಳೆದರೂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣವಾಗದೆ ಆಡಳಿತಾತ್ಮಕ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ.

    ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಸರ್ಕಾರ ಇತ್ತೀಚೆಗೆ ಮೀಸಲು ಪಟ್ಟಿ ಪ್ರಕಟಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯದ ಕೆಲವೆಡೆ ಕೋರ್ಟ್ ಮೊರೆ ಹೋಗಲಾಗಿದೆ. ಇದರಿಂದ ಕೂಡ ಆಯ್ಕೆ ಪ್ರಕ್ರಿಯೆ ವಿಳಂಬವಾಗಿದೆ.

    ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರ ಸ್ಥಾಪನೆಯಾಗದೆ ಆಡಳಿತಾತ್ಮಕ ಕೆಲಸಗಳಿಗೆ ಹಿನ್ನಡೆಯಾಗಿದೆ. ಗೆದ್ದು ಕೆಲಸ ಮಾಡುವ ಹುಮ್ಮಸ್ಸಿನಲ್ಲಿದ್ದ ಸದಸ್ಯರ ಕೈ ಕಟ್ಟಿದಂತಾಗಿದೆ.

    16 ಸದಸ್ಯ ಬಲದ ಪಪಂನಲ್ಲಿ 8 ಬಿಜೆಪಿ, 6 ಕಾಂಗ್ರೆಸ್, ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಒಂದು ಕಾಲದಲ್ಲಿ ರೆಬೆಲ್ ಆಗಿ ಗುಟುರು ಹಾಕುತ್ತಿದ್ದ ಜೆಡಿಎಸ್ ನೆಲೆ ಕಳೆದುಕೊಂಡಿದೆ.

    ಈ ಹಿಂದೆ ಪ್ರಕಟಿಸಿದ ಪಟ್ಟಿಯಂತೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಅಧಿಕಾರ ಹಿಡಿಯಲು ತೆರೆಮರೆ ಕಸರತ್ತು ಶುರುವಾಗಿದ್ದವು. ಆನಂತರ ವಿಳಂಬವಾದ ಕಾರಣ ಆಕಾಂಕ್ಷಿತರಿಗೆ ನಿರಾಸೆ ಮೂಡಿಸಿದೆ.

    ಮುಖ್ಯಾಧಿಕಾರಿ ಎಚ್.ಕಾಂತರಾಜ್ ಹೇಳಿಕೆ: ವಿವಿಧ ಕಾರಣಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿಳಂಬವಾಗಿದೆ. ಸಚಿವರ ಸೂಚನೆ ಮೇರೆಗೆ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ. ಯದ್ದಲಭೊ ಮ್ಮಯ್ಯನಹಟ್ಟಿ ಮತ್ತು ಶ್ರೀನಿಸಾನಾಯಕ ಬಡಾವಣೆಯಲ್ಲಿ ತಲಾ 15 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿವ ನೀರಿನ ಘಟಕ ನಿರ್ಮಿಸಲಾಗುತ್ತಿದೆ.

    2ನೇ ವಾರ್ಡ್ ಸದಸ್ಯೆ ಲೀಲಾವತಿ ಹೇಳಿಕೆ: ಮೊದಲ ಬಾರಿ ಪ್ರಕಟಿಸಿದ್ದ ಪಟ್ಟಿಯಲ್ಲಿ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಿತ್ತು. ಎರಡನೇ ಪಟ್ಟಿಯಲ್ಲಿ ಬದಲಿಸಿರುವುದು ನೋವಿನ ಸಂಗತಿ. ಕ್ಷೇತ್ರದ ಶಾಸಕರನ್ನು ನಂಬಿದ್ದೇವೆ. ಅವರ ವಿವೇಚನೆಗೆ ಬಿಟ್ಟಿದ್ದೇವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts