More

    ಬಾಲ್ಯ ಅನುಭವಿಸಲು ಮಕ್ಕಳಿಗೆ ಅವಕಾಶ ಕೊಡಿ

    ಹಿರಿಯೂರು: ಮಕ್ಕಳನ್ನು ಮಕ್ಕಳಂತೆ ಇರಲು ಬಿಟ್ಟು ಅವರ ಬಾಲ್ಯ ಅನುಭವಿಸಲು ಅವಕಾಶ ಕೊಡಿ ಎಂದು ನ್ಯಾಯಾಧೀಶೆ ದಮಯಂತಿ ಸೋಮಯ್ಯ ಹೇಳಿದರು.

    ತಾಲೂಕು ಆಡಳಿತ, ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ತಾಪಂ ಹಾಗೂ ಕಾರ್ಮಿಕ ಇಲಾಖೆ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

    ದೇಶದ ಪ್ರತಿಯೊಬ್ಬ ಮಗುವಿಗೂ ಶಿಕ್ಷಣದ ಹಕ್ಕಿದೆ. ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಉಜ್ವಲ ಭವಿಷ್ಯಕ್ಕೆ ನೆರವಾಗಲಿದೆ. ಬಾಲ ಕಾರ್ಮಿಕ ಪದ್ಧತಿ ನಿಷೇಧಿಸಿದ್ದು ಚಿಕ್ಕ ಮಕ್ಕಳನ್ನು ದುಡಿಮೆಗೆ ಕಳುಹಿಸುವ ಬದಲು ಓದಿಸಿ ಎಂದರು.

    ನ್ಯಾಯಾಧೀಶೆ ಫರ್ಹಾ ಬೇಗಂ, ತಹಸೀಲ್ದಾರ್ ಸತ್ಯನಾರಾಯಣ, ಕಾರ್ಮಿಕ ಇಲಾಖೆ ಅಧಿಕಾರಿ ರಾಜಣ್ಣ, ಶಶಿಧರ್, ಅನಸೂಯಮ್ಮ, ತಿಮ್ಮರಾಯಪ್ಪ, ರವೀಶ್, ತಿಪ್ಪೇಸ್ವಾಮಿ, ಶ್ರೀನಿವಾಸ್ ರೆಡ್ಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts