ಮೊಳಕಾಲ್ಮೂರು: ರಾಷ್ಟ್ರೀಯ ಕಿಸಾನ್ ಸಂಘದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ, ರಾಂಪುರ ನಿವಾಸಿ ಮಂಜುಳಾ ಡಾ.ಸ್ವಾಮಿ (66) ಶುಕ್ರವಾರ ರಾತ್ರಿ ಹೃದಯಘಾತದಿಂದ ನಿಧನ ಹೊಂದಿದರು.
ಪತಿ ಡಾ.ಎಂ.ಎಸ್.ಸತ್ಯನಾರಾಯಣ, ಮೂವರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಚಿಕ್ಕವಯಸ್ಸಿನಿಂದಲೇ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ತಾಲೂಕಿಗೆ ಶಾಶ್ವತ ಕುಡಿಯುವ ನೀರು ಯೋಜನೆ ಜಾರಿ ಸೇರಿ ವಿವಿಧ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಸ್ವಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು.