25.7 C
Bangalore
Sunday, December 15, 2019

ಉಪನ್ಯಾಸಕರಿಲ್ಲದ ಪಿಯು ಕಾಲೇಜ್

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಮೊಳಕಾಲ್ಮೂರು: ವಿದ್ಯಾರ್ಥಿಗಳ ಕೊರತೆಯಿಂದ ಬಳಲುವ ಸರ್ಕಾರಿ ಕಾಲೇಜುಗಳು ಒಂದೆಡೆಯಾದರೆ, ವಿದ್ಯಾರ್ಥಿಗಳಿದ್ದರೂ ಉಪನ್ಯಾಸಕರು ಇಲ್ಲದಿರುವುದು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದುಸ್ಥಿತಿ.

ತಾಲೂಕು ಕೇಂದ್ರದಲ್ಲಿ ಇರೋದೊಂದು ಸರ್ಕಾರಿ ಪದವಿ ಪೂರ್ವ ಕಾಲೇಜು. ಇಲ್ಲಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಿವೆ. ಪ್ರಸ್ತುತ ಶೈಕ್ಷಣಿಕ ವರ್ಷ ಮೇ 21ರಿಂದ ಆರಂಭವಾಗಿದೆ. ಜೂನ್ 1ರಿಂದ ತರಗತಿಗಳು ಪ್ರಾರಂಭವಾಗ ಬೇಕಿತ್ತು. ತಿಂಗಳಾದರೂ, ಉಪನ್ಯಾಸಕರಿಲ್ಲದೆ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಈ ಅವ್ಯವಸ್ಥೆ ಗೆಬೇಸತ್ತು ಹಲವು ವಿದ್ಯಾರ್ಥಿಗಳು ಅಕ್ಕಪಕ್ಕದ ನಗರದ ಕಾಲೇಜಿಗೆ ವಲಸೆ ಹೋಗಿದ್ದಾರೆ.

ಕಾಲೇಜಿನಲ್ಲಿ ಪ್ರಾಚಾರ್ಯರು ಸೇರಿ ಆಂಗ್ಲ ಭಾಷೆ, ರಸಾಯನಶಾಸ್ತ್ರ, ರಾಜ್ಯಶಾಸ್ತ್ರ ಬೋಧನೆಗೆ 4 ಉಪನ್ಯಾಸಕರಿದ್ದಾರೆ. ಉಳಿದ ವಿಷಯವಾರು 11 ಖಾಯಂ ಉಪನ್ಯಾಸಕರ ಕೊರತೆ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಸೌಲಭ್ಯಗಳಿದ್ದರೂ ಉಪನ್ಯಾಸಕರು ಇಲ್ಲದಿರುವುದು ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿದೆ.

ಆರ್ಥಿಕವಾಗಿ ಹಿಂದುಳಿದ ಪ್ರದೇಶ, ಬರಗಾಲದ ಸಂಕಷ್ಟದ ಮಧ್ಯೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದೇ ಕಷ್ಟ. ಇಂಥ ಪರಿಸ್ಥಿತಿಯಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ವಿದ್ಯಾರ್ಥಿ ಭವಿಷ್ಯಕ್ಕೆ ಮಾರಕ. ಸರ್ಕಾರ, ಕೂಡಲೇ ಉಪನ್ಯಾಸಕರನ್ನು ನೇಮಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.

ಅತಿಥಿ ಉಪನ್ಯಾಸಕರ ನೇಮಕಕ್ಕೂ ಆದೇಶ ನೀಡಿಲ್ಲ: ಉಪನ್ಯಾಸಕರನ್ನು ನೇಮಿಸುವಂತೆ ಮೇಲಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ಅತಿಥಿ ಉಪನ್ಯಾಸಕರನ್ನು ನೇಮಿಸುವ ಮಾರ್ಗಸೂಚಿ ಇದ್ದರೂ, ಈವರೆಗೆ ಆದೇಶ ಪ್ರತಿ ಕೈಸೇರಿಲ್ಲ. ಇರುವ 4 ಉಪನ್ಯಾಸಕರಿಂದ ನೋಂದಣಿ, ಪಾಠ. ಪರೀಕ್ಷೆ, ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ವಿತರಣೆ ನಿಭಾಯಿಸುವುದು ಆಗುತ್ತಿಲ್ಲ ಎಂಬುದು ಪ್ರಾಚಾರ್ಯ ಜಿ.ವಿ.ನಾಗರಾಜ್ ಅಳಲು.

ಉಪನ್ಯಾಸಕರ ನೇಮಕಕ್ಕೆ ಒತ್ತಾಯ: ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದಿದ್ದೇವೆ. ಸರ್ಕಾರಿ ಕಾಲೇಜಿನಿಂದ ಭವಿಷ್ಯ ನಿರ್ಮಿಸಿಕೊಳ್ಳುವ ಕನಸಿದೆ. ಉಪನ್ಯಾಸಕರಿಲ್ಲದೇ ಸಿಲಬಸ್ ಪೂರ್ಣಗೊಳಿಸುವುದು ಕಷ್ಟ. ತಕ್ಷಣ, ಉಪನ್ಯಾಸಕರನ್ನು ನೇಮಿಸಬೇಕು ಎಂದು ದ್ವಿತೀಯ ಪಿಯು ವಿದ್ಯಾರ್ಥಿಗಳಾದ ಎಂ.ಪಿ.ವತ್ಸಲಾ, ಕೆ.ಯರ‌್ರಿಸ್ವಾಮಿ, ಎಚ್.ಎಸ್.ಸುಪ್ರಜಾ, ಕೆ.ಎನ್. ಸೌಜನ್ಯಾ, ಪಾಪಣ್ಣ, ಸುರೇಶ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಪೂರಕ ವಾತಾವರಣ ರೂಪಿಸಬೇಕೆಂಬುದು ಇಲಾಖೆ ಉದ್ದೇಶ. ದ್ವಿತೀಯ ಪಿಯು ಪೂರಕ ಪರೀಕ್ಷೆಗಳ ಒತ್ತಡವಿತ್ತು. ಕೂಡಲೇ, ಅತಿಥಿ ಉಪನ್ಯಾಸಕರ ನೇಮಕಾತಿಯ ಆದೇಶ ಪ್ರತಿಯನ್ನು ಪ್ರಾಚಾರ್ಯರಿಗೆ ರವಾನಿಸಲಾಗುವುದು ಎಂದು ಪಿಯು ಡಿಡಿ ಎಂ.ಪಿ.ಶೋಭಾ ತಿಳಿಸಿದ್ದಾರೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...