More

    ಮಹಿಳಾ ಸ್ವಾವಲಂಬನೆಗೆ ಧರ್ಮಸ್ಥಳ ಸಂಸ್ಥೆ ಶ್ರಮ

    ಮೊಳಕಾಲ್ಮೂರು: ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯರಿಗೆ ಬದುಕು ಕಟ್ಟಿಕೊಡುವಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಶ್ರಮಿಸುತ್ತಿದೆ ಎಂದು ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಡಿ.ಷಡಾಕ್ಷರಪ್ಪ ತಿಳಿಸಿದರು.

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಪಟ್ಟಣದ ಶಿವಸದನದಲ್ಲಿ ಸಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಜ್ಞಾನ ವಿಕಾಸದಡಿ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಮನೆಗೆ ಸೀಮಿತವಾಗಿದ್ದ ಸ್ತ್ರೀಯರು ಸಮಾಜದ ಮುಖ್ಯವಾಹಿನಿಗೆ ಕರೆತಂದು ಅಕ್ಷರ, ಆರ್ಥಿಕ ಸಬಲ, ವ್ಯವಹಾರದ ಜ್ಞಾನ ಕಲಿಸುತ್ತಿದೆ. ಈ ಮೂಲಕ ಮಹಿಳೆಯರಿಗೆ ಕುಟುಂಬ ನಿರ್ವಹಣೆ ಜತೆಗೆ ಆಧಾರವಾಗುವ ಕೌಶಲ ನೀಡುತ್ತಿದೆ. ಗ್ರಾಮೀಣ ಭಾಗದ ಸಾವಿರಾರು ಕುಟುಂಬಗಳಿಗೆ ಸಂಸ್ಥೆ ಬೆಳಕಿನ ಹಾದಿ ತೋರುತ್ತಿದೆ ಎಂದರು.

    ಸಂಸ್ಥೆ ಜಿಲ್ಲಾ ನಿರ್ದೇಶಕ ಎಸ್.ಜನಾರ್ದನ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಗ್ರಾಮೀಣ ಮಹಿಳೆಯರ ಉನ್ನತಿಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಪ್ರಸ್ತುತ ವಿಭಾಗೀಯ ಮಟ್ಟದಲ್ಲಿ 15 ಸಾವಿರ ನಿರ್ಗತಿಕ ಕುಟುಂಬಗಳ ಬದುಕನ್ನು ಹಸನಾಗಿಸಿದೆ. ಈ ಪೈಕಿ 120 ಫಲಾನುಭವಿಗಳಿಗೆ ಸೂರು ಕಲ್ಪಿಸಿದೆ. ಜತೆಗೆ ಸ್ವ ಉದ್ಯೋಗ ಕೈಗೊಳ್ಳಲು ನೆರವು ನೀಡಿದೆ ಎಂದು ಹೇಳಿದರು.

    ಜಲಮೂಲ ಸಂರಕ್ಷಣೆ ಮಾಡಲು ಬಯಲುಸೀಮೆ ಪ್ರದೇಶದ 460 ಕೆರೆಗಳನ್ನು ಪುನಶ್ಚೇತನ ಮಾಡಲಾಗಿದೆ. ಆಯ್ದ 430 ಬಹುಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಗಿಸದೆ ಎಂದರು.

    ಸಂಸ್ಥೆ ಪ್ರಾದೇಶಿಕ ನಿರ್ದೇಶಕಿ ಬಿ.ಗೀತಾ, ಬಳ್ಳಾರಿಯ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು ಪ್ರಾಧ್ಯಾಪಕಿ ಕೆ.ವಿ.ಪ್ರಜ್ಞಾ ಉಪನ್ಯಾಸ ನೀಡಿದರು.
    ಪಟ್ಟಣ ಪಂಚಾಯಿತಿ ಸದಸ್ಯೆ ಭಾಗ್ಯಮ್ಮ ಅಧ್ಯಕ್ಷತೆ ವಹಿಸಿದ್ದರು. ಯೋಜನಾಧಿಕಾರಿ ಶಶಿಕಲಾ, ಸುವರ್ಣಾ, ವಕೀಲೆ ವಿಜಯಲಕ್ಷಿ ್ಮ, ಸಿಡಿಪಿಒ ಇಲಾಖೆ ಮೇಲ್ಚಿಚಾರಕಿ ಲೀಲಾಬಾಯಿ, ಸರ್ವಮಂಗಳಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts