ಅನ್ನದಾತರ ಸಮಸ್ಯೆ ಬಗೆಹರಿಸಿ

ಮೊಳಕಾಲ್ಮೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ರೈತರ ಸಾಲಮನ್ನಾ ವಿಚಾರದಲ್ಲಿ ವಿರೋಧಿ ನೀತಿ ಅನುಸರಿಸುತ್ತಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ ನಡೆ ಖಂಡಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ರಸ್ತೆ ತಡೆ ನಡೆಸಿದರು.

ಕೆಇಬಿ ವೃತ್ತದಿಂದ ಹೊರಟ ಪ್ರತಿಭಟನಾಕಾರರು, ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ಜಮೆ ಆಗಿಲ್ಲ. ಕೂಡಲೇ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಪಟ್ಟಣದಲ್ಲಿ ಪ್ರತ್ಯೇಕ ವಾರದ ಸಂತೆ ಪ್ರಾಂಗಣ, ಸಾರಿಗೆ ಡಿಪೋ ಮತ್ತು ಬಸ್ ನಿಲ್ದಾಣ ನಿರ್ಮಾಣ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿದರು.

ತಹಸೀಲ್ದಾರ್ ಎಸ್.ಅನಿತಾ ಲಕ್ಷ್ಮೀ ಮನವಿ ಸಲ್ಲಿಸಿದರು. ರೈತ ಸಂಘದ ತಾಲೂಕು ಅಧ್ಯಕ್ಷ ಬೆಳಗಲ್ ಈಶ್ವರಯ್ಯ ಸ್ವಾಮಿ, ಮುಖಂಡರಾದ ಬೇಡರಡ್ಡಿಹಳ್ಳಿ ಬಸವರಡ್ಡಿ, ಮರ‌್ಲಹಳ್ಳಿ ರವಿಕುಮಾರ, ತಿಮ್ಮಪ್ಪ, ಕನಕ ಶಿವಮೂರ್ತಿ, ಮರಿಲಿಂಗಣ್ಣ, ಚಂದ್ರಣ್ಣ, ನೀಲಪ್ಪ, ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *