ಕಾರಿನ ಸ್ಟೆಪ್ನಿಯನ್ನು ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಅಚ್ಚರಿ! ಒಂದಲ್ಲ, ಎರಡಲ್ಲ ಲಕ್ಷ ಲಕ್ಷ ಹಣ ಪತ್ತೆ | Money In Car Stepney

Money In Car Stepney

Money In Car Stepney : ಜಾರ್ಖಂಡ್​ ವಿಧಾನಸಭೆ ಚುನಾವಣೆ ನಡೆಯುತ್ತಿರುವುದು ಗೊತ್ತೇ ಇದೆ. ಈಗಾಗಲೇ ಮೊದಲ ಹಂತದ ಮತದಾನ ನಡೆದಿದ್ದು, ಎರಡನೇ ಹಂತದ ಮತದಾನ ಬಾಕಿ ಇದೆ. ಹೀಗಾಗಿ ಚುನಾವಣಾ ಅಧಿಕಾರಿಗಳ ತಪಾಸಣೆ ಮುಂದುವರಿದಿದೆ. ಇದೇ ಸಮಯದಲ್ಲಿ ಕಾರಿನ ಸ್ಟೆಪ್ನಿಯಲ್ಲಿ ಬಚ್ಚಿಟ್ಟಿದ್ದ ಬರೋಬ್ಬರಿ 25 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿರುವ ಘಟನೆ ಜಾರ್ಖಂಡ್-ಬಿಹಾರ ಗಡಿಯಲ್ಲಿರುವ ಬುದ್ವಾಡಿಹ್ (ಸರೌನ್) ಚೆಕ್ ಪೋಸ್ಟ್‌ನಲ್ಲಿ ನಡೆದಿದೆ.

ಗುರುವಾರ ವಾಹನ ತಪಾಸಣೆ ವೇಳೆ ಅಧಿಕಾರಿಗಳ ತಂಡ ಇಷ್ಟೊಂದು ಮೊತ್ತವನ್ನು ವಶಪಡಿಸಿಕೊಂಡಿದೆ. ಒಟ್ಟು 25 ಲಕ್ಷ ರೂಪಾಯಿ ಜೊತೆಗೆ ಒಂದು ಕಾರನ್ನು (ಸ್ವಿಫ್ಟ್ ಡಿಜೈರ್) ವಶಪಡಿಸಿಕೊಳ್ಳಲಾಗಿದೆ. ಎಲ್ಲ ಹಣವನ್ನು ಕಾರಿನ ಸ್ಟೆಪ್ನಿಯಲ್ಲಿ ಬಚ್ಚಿಟ್ಟಿದ್ದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಿರಿದಿ ಜಿಲ್ಲೆಯ ಜಿಲ್ಲಾಧಿಕಾರಿ ನಮನ್ ಪ್ರಿಯೇಶ್ ಲಾಕ್ರಾ ಮತ್ತು ಎಸ್ಪಿ ಡಾ ವಿಮಲ್ ಕುಮಾರ್ ಅವರಿಗೆ ಪ್ರಕರಣದ ಸಂಪೂರ್ಣ ಮಾಹಿತಿ ನೀಡಲಾಗಿದೆ. ಈ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆಗೂ ತಿಳಿಸಲಾಗಿದೆ.

ಇದನ್ನೂ ಓದಿ: ಸೀಬೆಹಣ್ಣನ್ನು ಯಾರು ತಿನ್ನುವಂತಿಲ್ಲ? ಒಂದು ವೇಳೆ ತಿಂದರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ… Guava

ಈ ಕುರಿತು ಡಿಯೋರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಸೋನು ಕುಮಾರ್ ಸಾಹು ಮಾತನಾಡಿ, ಕಾರಿನಲ್ಲಿ ನೋಟುಗಳ ಬಂಡಲ್ ತೆಗೆದುಕೊಂಡು ಹೋಗುತ್ತಿರುವ ಬಗ್ಗೆ ರಹಸ್ಯ ಮಾಹಿತಿ ಲಭಿಸಿತು. ಕೂಡಲೇ ನಾವು ಸಕ್ರಿಯರಾದೆವು ಮತ್ತು ಬಿಹಾರ ಗಡಿಯಲ್ಲಿನ ಚೆಕ್​ಪೋಸ್ಟ್ ಸಿಬ್ಬಂದಿ ಕೂಡ ಸಕ್ರಿಯರಾದರು. ಚೆಕ್​ಪೋಸ್ಟ್​ಗೆ ಬಂದ ಕಾರೊಂದನ್ನು ನಿಲ್ಲಿಸಿ ಕೂಲಂಕುಷವಾಗಿ ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ ಎಂದರು.

ಹಣವನ್ನು ದಿಯೋಘರ್‌ನಿಂದ ರಾಜಧನವರ್‌ಗೆ ತೆಗೆದುಕೊಂಡು ಹೋಗುತ್ತಿದ್ದುದ್ದಾಗಿ ಯುವಕರು ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಇನ್ಸ್​ಪೆಕ್ಟರ್​ ಸೋನು ಕುಮಾರ್ ಮಾಹಿತಿ ನೀಡಿದರು. (ಏಜೆನ್ಸೀಸ್​)

ಭಾರತದ ಅತ್ಯಂತ ದುಬಾರಿ ಎಮ್ಮೆ ಇದು! ಇದರ ಬೆಲೆಯಲ್ಲಿ 10 ಮರ್ಸಿಡಿಸ್ ಬೆಂಜ್ ಕಾರು ಖರೀದಿಸಬಹುದು | Expensive Buffalo

ಸೈಕಾಲಜಿ ಪ್ರಕಾರ ಈ ಗುಣಗಳನ್ನು ಹೊಂದಿರುವ ವ್ಯಕ್ತಿಗಳು ಜೀವನದಲ್ಲಿ ಹೆಚ್ಚು ಹಣ ಸಂಪಾದನೆ ಮಾಡ್ತಾರೆ! Money

Share This Article

Health Tips: ನೆಲದ ಮೇಲೆ ಕುಳಿತುಕೊಂಡು ತಿನ್ನಲು ಸಾಧ್ಯವಿಲ್ಲವೇ? ಆದ್ರೆ ಈ ಅದ್ಭುತ ಪ್ರಯೋಜನಗಳೇನು ಗೊತ್ತಾ?

Health Tips: ನಮ್ಮ ಹಿರಿಯರು ಊಟ ಮಾಡುವಾಗ ನೆಲದ ಮೇಲೆ ಕಾಲು ಮಡಚಿ ಕೂರುತ್ತಿದ್ದರು. ಆಧುನಿಕ ಕಾಲದಲ್ಲಿ…

Alcohol In Winter: ಚಳಿಯಲ್ಲಿ ಮದ್ಯ ಸೇವನೆ ಎಷ್ಟು ಅಪಾಯಕಾರಿ ಗೊತ್ತಾ?

Alcohol In Winter: ಚಳಿಗಾಲ ಆರಂಭವಾಗಿದೆ ಮತ್ತು ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಲ್ಲದೆ, ಜ್ವರ…

ಚಳಿಗಾಲದಲ್ಲಿ ಸೀಬೆಹಣ್ಣನ್ನು ಹೇಗೆ ತಿಂದರೆ ಆರೋಗ್ಯಕ್ಕೆ ಪ್ರಯೋಜನಕಾರಿ; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಸೀಬೆಹಣ್ಣು ತಿನ್ನುವುದರಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ತಲೆಯಿಂದ ಕಾಲ್ಬೆರಳು ಉಗುರುಗಳವರೆಗೆ ಆರೋಗ್ಯಕರವಾಗಿರಲು ಇದು ಕಿತ್ತಳೆಗಿಂತ ಹೆಚ್ಚು…