ಹಣ ವಶಪಡಿಸಿಕೊಂಡಿದ್ದ ಪ್ರಕರಣ ಇತ್ಯರ್ಥ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾಹಿತಿ

Money release committee meeting Mandya
Published on

ಮಂಡ್ಯ: ಲೋಕಸಭಾ ಚುನಾವಣೆಯ ಮಾದರಿ ನೀತಿಸಂಹಿತೆ ಜಾರಿಯಲ್ಲಿದ್ದ ವೇಳೆ ವಶಪಡಿಸಿಕೊಳ್ಳಲಾಗಿದ್ದ ಹಣಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಕರಣವನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.

ನಗರದ ಜಿಪಂ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಹಣ ಬಿಡುಗಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀತಿಸಂಹಿತೆ ಸಮಯದಲ್ಲಿ ಕ್ಷಿಪ್ರ ಸಂಚಾರ ದಳ ಮತ್ತು ಸ್ಥಾಯಿ ಕಣ್ಗಾವಲು ತಂಡ, ಪೊಲೀಸರು ತಪಾಸಣೆ ನಡೆಸಿದ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣವನ್ನು ಆಯಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ/ತಾಲೂಕು ಉಪಖಜಾನೆಯ ವಶದಲ್ಲಿರಿಸಲಾಗಿತ್ತು ಎಂದರು.

ವಶಪಡಿಸಿಕೊಂಡಿದ್ದ ಹಣ ರಾಜಕೀಯ ಉದ್ದೇಶಕ್ಕಾಗಿ ಬಳಕೆಯಾಗದೆ ಇರುವ ಬಗ್ಗೆ ಸಂಬಂಧಿಸಿದವರಿಂದ ದಾಖಲಾತಿಗಳನ್ನು ಪಡೆದು ಪರಿಶೀಲಿಸಿ ಖಾತ್ರಿಪಡಿಸಿಕೊಂಡ ನಂತರ ಸಂಬಂಧಿಸಿದ ವ್ಯಕ್ತಿಗಳಿಗೆ ಬಿಡುಗಡೆ ಮಾಡಲಾಗಿದೆ. ಅಂತೆಯೇ ಪ್ರಕರಣವೊಂದರಲ್ಲಿ 70 ಸಾವಿರ ರೂ ಜಪ್ತಿ ಮಾಡಲಾಗಿತ್ತು. ಇದಕ್ಕೆ ಸೂಕ್ತ ದಾಖಲಾತಿ ಹಾಜರುಪಡಿಸಿದ ಹಿನ್ನಲೆ ಹಣ ಬಿಡುಗಡೆಗೊಳಿಸಲು ಸಮಿತಿ ತೀರ್ಮಾನಿಸಿತು. ಇದರೊಂದಿಗೆ ಹಣ ಬಿಡುಗಡೆ ಸಮಿತಿಯ ಮುಂದೆ ಇದ್ದ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಜಿಪಂ ಮುಖ್ಯಲೆಕ್ಕಾಧಿಕಾರಿ ಚಂದ್ರಶೇಖರ್, ಜಿಲ್ಲಾ ಖಜಾನೆ ಉಪನಿರ್ದೇಶಕ ಸಿದ್ದಲಿಂಗಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net