More

    ಮದ್ಯದಂಗಡಿಯಲ್ಲಿ ಹಣ ಕಳವು

    ನಂಜನಗೂಡು: ತಾಲೂಕಿನ ಗೋಳೂರು ಗ್ರಾಮದಲ್ಲಿರುವ ಮದ್ಯದಂಗಡಿಯಲ್ಲಿ ಮಂಗಳವಾರ ತಡರಾತ್ರಿ ದುಷ್ಕರ್ಮಿಗಳು ಬಾಗಿಲು ಮುರಿದು ಸುಮಾರು 30 ಸಾವಿರ ರೂ. ಹೆಚ್ಚು ನಗದನ್ನು ಕಳವು ಮಾಡಿದ್ದಾರೆ.
    ಗ್ರಾಮದ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಶ್ರೀ ಬಾಲಾಜಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಮಂಗಳವಾರ ತಡರಾತ್ರಿ ಮುಖಗವಸು ಧರಿಸಿಕೊಂಡು ಬಾರ್ ಮುಂದೆ ಬಂದ ಇಬ್ಬರು ದುಷ್ಕರ್ಮಿಗಳು ಬಾಗಿಲು ಒಡೆದು ಒಬ್ಬ ಒಳನುಗ್ಗಿ ಕ್ಯಾಶ್ ಕೌಂಟರ್‌ನಲ್ಲಿಟ್ಟಿದ್ದ ಹಣವನ್ನು ದೋಚಿಕೊಂಡು ಪರಾರಿಯಾಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ವಿಷಯ ತಿಳಿದು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದರು. ಶ್ವಾನದಳ ಹಾಗೂ ಬೆರಳಚ್ಚು ತಂಡದ ಸಿಬ್ಬಂದಿ ತಪಾಸಣೆ ನಡೆಸಿದರು. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts