More

    ಅಬಕಾರಿ ನೀತಿ ಪ್ರಕರಣ; ಮನೀಶ್​ ಸಿಸೋಡಿಯಾಗೆ ಜಾಮೀನು ನೀಡಲು ಸುಪ್ರೀಂ ನಕಾರ

    ನವದೆಹಲಿ: ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಮಾಜಿ ಡಿಸಿಎಂ, ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್​ ಸಿಸೋಡಿಯಾಗೆ ಸುಪ್ರೀಂ ಕೋರ್ಟ್​ ಜಾಮೀನು ನಿರಾಕರಿಸಿದೆ.

    ಪ್ರಕರಣದ ತನಿಖೆಯನ್ನು ಮುಂದಿನ 6-8 ತಿಂಗಳ ಒಳಗಾಗಿ ಮುಗಿಸುವಂತೆ ಅದರ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ತನಿಖಾ ಸಂಸ್ಥೆಗೆ ಸೂಚಿಸಿರುವ ಬೆನ್ನಲ್ಲೇ ಜಾಮೀನು ಸಿಗುವುದು ಡೌಟ್​ ಎಂದು ಹೇಳಲಾಗಿದೆ.

    ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ 338 ಕೋಟಿ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದು ಕಂಡು ಬಂದಿದ್ದು, ಮುಂದಿನ 6-8ರಿಂದ ತಿಂಗಳ ಒಳಗಾಗಿ ತನಿಖೆ ಙಊರ್ಣಗೊಳದಿದ್ದರೆ ಸಿಸೋಡಿಯಾ ಆ ನಂತರ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

    ಇದನ್ನೂ ಓದಿ: ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ

    ತನಿಖಾ ಸಂಸ್ಥೆಗಳು ಎಲ್ಲಾ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇತ್ತ ಸಿಸೋಡಿಯಾ ಪರ ವಕೀಲರು ತಮ್ಮ ಕಕ್ಷಿದಾರರನ್ನು ಅಕ್ರಮವಾಗಿ ಬಂಧಿಸಲಾಗಿದ್ದು, ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ನಟಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

    ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕಳೆದ ವರ್ಷ ಫೆಬ್ರವರಿಯಲ್ಲಿ ಮನೀಶ್​ ಸಿಸೋಡಿಯಾ ಅವರನ್ನು ಸಿಬಿಐ ಹಾಗೂ ED ವಶಕ್ಕೆ ಪಡೆದಿದ್ದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts