More

    ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿಗಾವಹಿಸಿ

    ರಾಯಚೂರು: ಲೋಕಸಭೆ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಅಕಾರಿಗಳು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಪ್ರತಿಯೊಂದು ಚಟುವಟಿಕೆಗಳ ಮೇಲೆ ಅಕಾರಿಗಳು ನಿಗಾ ವಹಿಸಬೇಕು ಎಂದು ಚುನಾವಣೆ ವೆಚ್ಚ ವೀಕ್ಷಕ ಗುಂಜನಕುಮಾರ ತಿಳಿಸಿದರು.
    ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಚುನಾವಣೆ ಕಾರ್ಯಕ್ಕೆ ನೇಮಕಗೊಂಡ ನೋಡಲ್ ಅಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
    ಸಹಾಯಕ ವೆಚ್ಚ ವೀಕ್ಷಕರು, ಎ್ಎಸ್‌ಟಿ, ಎಸ್‌ಎಸ್‌ಟಿ ಮತ್ತು ವಿವಿಟಿ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಚೆಕ್‌ಪೋಸ್ಟ್‌ಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಸೌಜನ್ಯದಿಂದ ವರ್ತಿಸಿ ಸಮರ್ಪಕ ರೀತಿಯಲ್ಲಿ ತಪಾಸಣೆ ನಡೆಸಬೇಕು.
    ದಾಖಲೆ ರಹಿತ ಹಣ ಅಥವಾ ಇನ್ನಿತರ ವಸ್ತುಗಳು ಸಾಗಣೆಯಾಗದಂತೆ ನೋಡಿಕೊಳ್ಳಬೇಕು. ದಾಖಲೆಯಿಲ್ಲದೆ 50 ಸಾವಿರ ರೂ.ಗಿಂತ ಹೆಚ್ಚಿನ ಹಣ ಹೊಂದಿದ್ದಲ್ಲಿ ವಶಕ್ಕೆ ಪಡೆಯಬೇಕು. 10 ಲಕ್ಷ ರೂ.ಗಿಂತ ಮೇಲ್ಪಟ್ಟು ಹಣ ದೊರೆತಲ್ಲಿ ಕೂಡಲೇ ಆದಾಯ ತೆರಿಗಬೆ ಇಲಾಖೆ ಅಕಾರಿಗಳ ಗಮನಕ್ಕೆ ತರಬೇಕು.
    ಕಡ್ಡಾಯವಾಗಿ ವಿಡಿಯೋ ಹಾಗೂ ಪಂಚನಾಮೆ ಪ್ರಕ್ರಿಯೆ ಕೈಗೊಳ್ಳಬೇಕು. ಯಾವುದೇ ರೀತಿಯಲ್ಲಿ ಸಂಶಯದಲ್ಲಿ ನೋಡಲ್ ಅಕಾರಿಗಳನ್ನು ಸಂಪರ್ಕಿಸಬೇಕು ಎಂದು ಗುಂಜನಕುಮಾರ ತಿಳಿಸಿದರು.
    ಸಭೆಯಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts