More

    ಸರ್ಕಾರಿ ನೌಕರರ ಪೋಸ್ಟ್ ಮೇಲೆ ನಿಗಾ?; ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಂಚುವ ಮುನ್ನ ಎಚ್ಚರ

    ವಿಜಯವಾಣಿ: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ನೌಕರರು ಮನಸ್ಸಿಗೆ ಬಂದಂತೆ, ಸಿಕ್ಕಸಿಕ್ಕ ಪೋಸ್ಟ್​ಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಏಕೆಂದರೆ ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ಸರ್ಕಾರ ನಿಗಾ ವಹಿಸಿದೆ. ಸರ್ಕಾರಕ್ಕೆ ಮುಜುಗರ ತರುವಂತಹ, ಸರ್ಕಾರಕ್ಕೆ ವಿರುದ್ಧವಾಗಿರುವಂತಹ ಸಂದೇಶಗಳನ್ನು ಕೆಲ ಸರ್ಕಾರಿ ನೌಕರರು ಫೇಸ್​ಬುಕ್, ಇನ್​ಸ್ಟಾಗ್ರಾಂ, ಟ್ವಿಟರ್, ಟೆಲಿಗ್ರಾಂನಲ್ಲಿ ಹಂಚಿಕೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಖಾತೆಗಳ ಮೇಲೆ ಕಣ್ಣಿಡಲು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಆದ್ದರಿಂದ ಯಾರೂ ರಾಜಕೀಯ ಕುರಿತು ಚರ್ಚೆಗಳನ್ನು ಜಾಲತಾಣ ಗಳಲ್ಲಿ ಮಾಡಬೇಡಿ ಎಂದು ಸರ್ಕಾರಿ ನೌಕರರ ವಾಟ್ಸ್​ಆಪ್ ಗ್ರೂಪ್​ಗಳಲ್ಲಿ ಸಂದೇಶ ಹರಿದಾಡುತ್ತಿದೆ.

    2016ರಲ್ಲಿ ಪೊಲೀಸರು ಪ್ರತಿಭಟನೆ ಮಾಡಿದ ದಿನದಿಂದ ಹಿಡಿದು ಇತರ ಸರ್ಕಾರಿ ನೌಕರರ ವಿವಿಧ ಬೇಡಿಕೆಗಾಗಿ ನಡೆದ ಎಲ್ಲ ಹೋರಾಟಗಳ ಸಂದರ್ಭ ಪೊಲೀಸರ ಮುಖೇನ ಸರ್ಕಾರಿ ನೌಕರರ ವಾಟ್ಸ್​ಆಪ್, ಟ್ವಿಟರ್, ಇನ್​ಸ್ಟಾಗ್ರಾಂ, ಫೇಸ್​ಬುಕ್ ಖಾತೆಗಳ ಮೇಲೆ ಸರ್ಕಾರ ನಿಗಾ ಇರಿಸುತ್ತಲೇ ಬಂದಿದೆ. ಇತ್ತೀಚಿಗೆ ಸರ್ಕಾರದ ಮೇಲೆ ನೌಕರರು ಮುನಿಸಿಕೊಂಡಿದ್ದಾರೆ. ಸರ್ಕಾರ ಘೋಷಿಸಿದ ಪುಣ್ಯಕೋಟಿ ಯೋಜನೆಗೆ ಹಣ ನೀಡಿದವರು ಕೇವಲ ಶೇ.20 ನೌಕರರು. ಎನ್​ಪಿಎಸ್ ವಿರುದ್ಧ ಹೋರಾಟದ ವೇಳೆ, ನಂತರವೂ ಸರ್ಕಾರದಿಂದ ಯಾವುದೇ ರೀತಿಯ ಸೂಕ್ತ ಭರವಸೆ ಸಿಕ್ಕಿಲ್ಲ. ಹೀಗಾಗಿ ಸರ್ಕಾರದ ಆಡಳಿತ ವೈಖರಿ ವಿರುದ್ಧ ಸಂದೇಶಗಳನ್ನು ಹರಿಬಿಡುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

    ಜನರ ಖಾತೆಗಳ ಮೇಲೂ ಕಣ್ಣು: ಕೋಮುಗಲಭೆಗೆ ಪ್ರಚೋದನೆ ನೀಡುವ ಧರ್ಮ ಅವಹೇಳನಕಾರಿ ಸಂದೇಶಗಳನ್ನು ಜಾಲತಾಣಗಳಲ್ಲಿ ವಿನಿಮಯ ಮಾಡಿಕೊಳ್ಳುತ್ತಿರುವುದರಿಂದ ಸಾರ್ವಜನಿಕರು ಬಳಸುವ ಜಾಲತಾಣಗಳ ಮೇಲೂ ನಿಗಾ ಇಡಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರವಾಗಿ ನಿಗಾ ವಹಿಸಲೆಂದೇ ಪೊಲೀಸರಿಗೆ ತರಬೇತಿ ನೀಡಲಾಗಿದೆ. ಜಾಲತಾಣಗಳ ಪರಿಶೀಲನೆಗಾಗಿ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರತ್ಯೇಕ ತಂಡ ಕೆಲಸ ಮಾಡುತ್ತಿದೆ.

    ಪ್ರಚೋದಿಸಿದವರ ವಿರುದ್ಧ ಕೇಸ್: ಫೇಸ್ ಬುಕ್, ವಾಟ್ಸ್​ಆಪ್, ಟ್ವಿಟ್ಟರ್ ಸೇರಿ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪ್ರಚೋದನಕಾರಿ ಪೋಸ್ಟ್​ಗಳನ್ನು ಹಾಕುವವರ ಹಾಗೂ ಅದನ್ನು ಫಾರ್ವರ್ಡ್ ಮಾಡುವವರ ವಿರುದ್ಧ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

    ನಮ್ಮಲ್ಲೇ ಮೊದಲು: ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ-ತಂತ್ರಜ್ಞಾನ ಬಳಸಿ ಬರೆದ ಸುದ್ದಿ; ಇದು ಸಮಸ್ತ ಹಿರಿಯ ನಾಗರಿಕರಿಗೆ ಅರ್ಪಣೆ

    ತಲೆ ಮೇಲೇ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ 9 ವರ್ಷದ ಬಾಲಕ!

    ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಹದಿಹರೆಯದ ವಿದ್ಯಾರ್ಥಿನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts