More

    13 ದಿನಗಳ ಕಂದಮ್ಮನ ಮೇಲೆ ಕೋತಿ ದಾಳಿ; ಮಗುವನ್ನು ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

    ಚಿತ್ರದುರ್ಗ: ಮನೆಯಲ್ಲಿ ಮಲಗಿದ್ದ 13 ದಿನಗಳ ಶಿಶುವಿನ ಮೇಲೆ ಮಂಗ ದಾಳಿ ಮಾಡಿದ್ದು, ಮಗುವಿನ ಹಣೆ, ತಲೆ ಭಾಗದಲ್ಲಿ ಗಾಯಗೊಳಿಸಿದೆ. ಮಾರಣಾಂತಿಕ ದಾಳಿ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತೊರೆಕೋಲಮ್ಮನಹಳ್ಳಿಯಲ್ಲಿ ಶನಿವಾರ ನಡೆದಿದೆ.

    ಇದನ್ನೂ ಓದಿ: ಶ್ರಾವಣ ಮಾಸದಲ್ಲಿ ಮಾಂಸಾಹಾರ ಏಕೆ ಸೇವಿಸಬಾರದು?

    ಮಂಜುಳಾ-ಸಿದ್ದೇಶ್ ದಂಪತಿಯ 13ದಿನದ ಹೆಣ್ಣು ಮಗು ಮನೆಯಲ್ಲಿ ಮಲಗಿದ್ದ ವೇಲೆ ಕೋತಿ ದಾಳಿ ಮಾಡಿದೆ. ಮಗುವಿನ ಚೀರಾಟ ಕೇಳಿ ತಾಯಿ ಬಂದು ನೋಡಿದಾಗ ಕೋತಿ ಮಗುವಿನ ಪಕ್ಕದಲ್ಲಿರುವುದನ್ನು ಕಂಡು ಕಿರುಚಾಡಿದ್ದಾಳೆ. ಗಾಬರಿಗೊಂಡ ಮಂಗ ಸ್ಥಳದಿಂದ ಎಸ್ಕೇಪ್ ಆಗಿದೆ.

    ಇದನ್ನೂ ಓದಿ: ಪರ್ಮಿಶನ್ ಇಲ್ದೆ ಟೊಮ್ಯಾಟೋ ಅಡುಗೆಗೆ ಹಾಕಿದ್ದಕ್ಕೆ ಮನೆ ಬಿಟ್ಟು ಹೋದ ಪತ್ನಿ; ಅರ್ಧ ಕೆಜಿ ಟೊಮ್ಯಾಟೋ ಕೊಟ್ಟು ಕರೆದುಕೊಂಡು ಬಂದ ಪತಿ!

    ಮಗುವಿನ ಹಣೆ, ತಲೆ ಭಾಗದಲ್ಲಿ ಗಾಯಗೊಳಿಸಿದೆ. ಗಾಯಗೊಂಡ ಮಗುವನ್ನು ತಕ್ಷಣವೇ ಕುಟುಂಬಸ್ಥರು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

    ಇದನ್ನೂ ಓದಿ:  ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಬಾಲಿವುಡ್​​ ನಟ ಅಭಿಷೇಕ್ ಬಚ್ಚನ್ !

    ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಕೋತಿ ಕಾಣಿಸಿಕೊಂಡಿದೆ. ಏಕಾಏಕಿ ಮನೆಗೆ ನುಗ್ಗಿ ಮಗುವಿನ ಮೇಲೆ ದಾಳಿ ಮಾಡಿರುವ ಕೋತಿಯನ್ನು ಸೆರೆಗೆ ತೊರೆಕೋಲಮ್ಮನಹಳ್ಳಿ ಗ್ರಾಮಸ್ಥರ ಆಗ್ರಹಿಸಿದ್ದಾರೆ. ಮಂಗ ಹಸೂಗೂಸಿನ ಮೇಲೆ ದಾಳಿ ಮಾಡಿ ಸಮಸ್ಯೆ ನೀಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.

    ಬಿರಿಯಾನಿ ತಿಂದ ನಂತರ ನಿಮಗೆ ಬಾಯಾರಿಕೆಯಾಗಲು ಕಾರಣವೇನು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts