ಮುಂಬೈಗೆ ಆರೇಂಜ್​, ಗುಜರಾತ್‌ಗೆ ರೆಡ್ ಅಲರ್ಟ್..ಕರ್ನಾಟಕದಲ್ಲೂ ಭಾರಿ ಮಳೆ ಮುನ್ಸೂಚನೆ!

rain
Published on

ನವದೆಹಲಿ: ದೇಶದ ನಾನಾ ರಾಜ್ಯಗಳಲ್ಲಿ ಆ.24(ಶನಿವಾರ)ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(ಐಎಂಡಿ)ಯು ಮುನ್ನೆಚ್ಚರಿಕೆ ನೀಡಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಆರೇಂಜ್​ ಅಲರ್ಟ್​ ನೀಡಲಾಗಿದೆ. ಗುಜರಾತ್‌ಗೆ ರೆಡ್ ಅಲರ್ಟ್ ನೀಡಲಾಗಿದೆ .

ಗುಜರಾತ್, ವಿದರ್ಭ, ಮಹಾರಾಷ್ಟ್ರ, ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ಮುನ್ಸೂಚನೆ ನೀಡಿದೆ .

ಗುಜರಾತ್ನಲ್ಲಿ ಅತಿ ಹೆಚ್ಚು ( 20 ಸೆಂಮೀ) ಭಾರಿ ಮಳೆಯಾಗುತ್ತದೆ. ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ (12 ಸೆಂಮೀ), ಉತ್ತರಾಖಂಡ, ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ, ಜಾರ್ಖಂಡ್, ಮರಾಠವಾಡ, ಕೇರಳ ಮತ್ತು ಮಾಹೆ, ತೆಲಂಗಾಣ, ಕರಾವಳಿ ಮತ್ತು ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ (7 ಸೆಂ) ಮಳೆಯಾಗಲಿದೆ ಎಂದು ಐಎಂಡಿ ಹವಾಮಾನ ಬುಲೆಟಿನ್‌ನಲ್ಲಿ ತಿಳಿಸಿದೆ.

ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರ ಪ್ರದೇಶದಲ್ಲಿ ಗಂಟೆಗೆ 35 ಕಿಮೀ ನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಮುಂಬೈ, ರಾಯಗಡ ಮತ್ತು ರತ್ನಗಿರಿ ಜಿಲ್ಲೆಗಳು ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಹೀಗಾಗಿ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯು ದೆಹಲಿಯಲ್ಲಿ ಹಳದಿ ಅಲರ್ಟ್ ಅನ್ನು ಘೋಷಿಸಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net