ಮುಂಗಾರು ಮತ್ತಷ್ಟು ಚುರುಕು: ರಾಜ್ಯದ ಎಲ್ಲೆಲ್ಲಿ ಎಷ್ಟು ದಿನ ಆರೆಂಜ್ ಅಲರ್ಟ್?

monsoon
Published on

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡಿದೆ. ಬೆಂಗಳೂರು, ಮೈಸೂರಿನ ಹುಣಸೂರು, ಉತ್ತರ ಕನ್ನಡದ ಹಳೇಮಾತೆ, ಕಲ್ಲಬ್ಬೆ, ಬೆಂಗ್ರೆ, ಕೋಲಾರದ ಟಮಕಾ ಸೇರಿ ವಿವಿಧೆಡೆ ಶನಿವಾರವೂ ವರ್ಷಧಾರೆಯಾಗಿದೆ.

ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿಗಿಂತ ಕರಾವಳಿಯಲ್ಲಿ ಮುಂಗಾರು ಇನ್ನಷ್ಟು ಬಿರುಸುಗೊಂಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಜೂ 24ರಿಂದ 28ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಕೊಟ್ಟಿದೆ. ಬೀದರ್, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಜೂ 27ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ.

ರಾಜ್ಯದಲ್ಲಿ ವಾಡಿಕೆಗಿಂತ ತಡವಾಗಿ ಆಗಮಿಸಿರುವ ಮುಂಗಾರು ಜೂ. 18ರವರೆಗೆ ದುರ್ಬಲಗೊಂಡಿತ್ತು. ಇದರಿಂದಾಗಿ ಪ್ರಸಕ್ತ ತಿಂಗಳಲ್ಲಿ ಹೇಳಿಕೊಳ್ಳುವಷ್ಟೂ ಮಳೆ ಬಿದ್ದಿಲ್ಲ. ಕೆಲವೆಡೆ ಮಾತ್ರ ಒಂದೆರೆಡು ದಿನಗಳು ಜೋರಾಗಿ ಬಿದ್ದರೆ, ಉಳಿದ ಭಾಗಗಳಲ್ಲಿ ಸಾಧಾರಣ ಮಳೆಯಾಗಿತ್ತು. ಈಗ ಮುಂಗಾರು ಇನ್ನಷ್ಟು ಚುರುಕುಗೊಂಡಿದ್ದರಿಂದ ಮುಂದಿನ ದಿನಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net