ಮಳೆಗಾಲಕ್ಕೆ ಸಿದ್ಧಗೊಂಡಿಲ್ಲ ರಸ್ತೆ

Latest News

ಅಸಲಿ ಪೊಲೀಸರಿಗೆ ಸೆರೆಸಿಕ್ಕ ನಕಲಿ ಅಧಿಕಾರಿ: ಉದ್ಯಮಿಗೆ ಬೆದರಿಸಿ 24 ಲಕ್ಷ ರೂ. ಸುಲಿಗೆ, ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಬೆಂಗಳೂರು: ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಬೆದರಿಸಿ ಲಕ್ಷಾಂತರ ರೂ. ಸುಲಿಗೆ ಮಾಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಚ್​ಎಎಲ್...

ಯುವಕನ ಕೊಲೆ ಮಾಡಿದ್ದ ದಂಪತಿ ಬೆಳಗಾವಿಯಲ್ಲಿ ಸೆರೆ

ಆನೇಕಲ್: ಖಾಸಗಿ ಸಂಸ್ಥೆಯ ಉದ್ಯೋಗಿ ಭದ್ರಾವತಿಯ ಕಿರಣ್ ಕುಮಾರ್ (25) ಕೊಲೆ ಪ್ರಕರಣ ಭೇದಿಸಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಸುರೇಖಾ (38)...

ತನ್ನದಲ್ಲದ ತಪ್ಪಿಗೆ ದಂಡ ಕಟ್ಟಿದ ಟೆಕ್ಕಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ 4 ವರ್ಷ ಕಾರು ಓಡಿಸಿದ್ದ, ಆರ್​ಟಿಒ ವಶದಲ್ಲಿ ಉದ್ಯಮಿ

ಬೆಂಗಳೂರು: ಪರಿಚಿತರೊಬ್ಬರ ಬೆನ್ಜ್ ಕಾರಿನ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು 7 ವರ್ಷಗಳಿಂದ 27 ಲಕ್ಷ ರೂ. ತೆರಿಗೆ ವಂಚಿಸಿ ಓಡಾಡುತ್ತಿದ್ದ ಮರ್ಸಿಡೀಸ್...

ಅಕ್ರಮ ಸಂಪತ್ತಿಗೆ ಅಧಿಕಾರಿಗಳ ಕಾವಲು

| ರಮೇಶ ದೊಡ್ಡಪುರ ಬೆಂಗಳೂರು ನಗರ ಪ್ರದೇಶದಲ್ಲಿ ವಸತಿ, ವಾಣಿಜ್ಯ ಪ್ರದೇಶಗಳಲ್ಲಿ ಸಮತೋಲನ ಕಾಯ್ದುಕೊಳ್ಳಲು ರಚಿಸಲಾಗಿರುವ ಕಾನೂನು ಪಾಲಿಸಿ ಅಕ್ರಮ ಕಟ್ಟಡಗಳಿಗೆ ಬ್ರೇಕ್ ಹಾಕಬೇಕಾದ...

ಪೊಲೀಸ್ ಠಾಣೆಗಳಲ್ಲಿ ದಲಿತರ ದಿನ ಆಚರಣೆ ಕಡ್ಡಾಯ: ಪ್ರತಿ ತಿಂಗಳ 2ನೇ ಭಾನುವಾರ ಕಡ್ಡಾಯ, ನಿಯಮ ಪಾಲಿಸದ ಅಧಿಕಾರಿಗಳ ವಿರುದ್ಧ ಇಲಾಖೆ ಗರಂ

| ಕೀರ್ತಿನಾರಾಯಣ ಸಿ. ಬೆಂಗಳೂರು ದಲಿತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಪ್ರತಿ ತಿಂಗಳ 2ನೇ ಭಾನುವಾರ ‘ದಲಿತರ...

ಸಂದೀಪ್ ಸಾಲ್ಯಾನ್ ಬಂಟ್ವಾಳ

ಮಳೆಗಾಲ ನಿಧಾನವಾಗಿ ವೇಗ ಪಡೆದುಕೊಳ್ಳತೊಡಗಿದೆ. ಕೆಲವೆಡೆ ಆರಂಭದ ಮಳೆಗೆ ರಸ್ತೆ ಕೆಸರುಮಯವಾದರೆ ಇನ್ನೂ ಕೆಲವೆಡೆ ಚರಂಡಿ ಹೂಳೆತ್ತದೆ ಮಳೆ ನೀರು ರಸ್ತೆಯಲ್ಲೇ ಹರಿಯುವಂತಾಗಿದೆ. ಸ್ಥಳೀಯಾಡಳಿತಗಳು ಮಳೆಗಾಲದ ಸಿದ್ಧತೆ ಮಾಡಿಕೊಳ್ಳದ ಕಾರಣ ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ನರಕ ಸದೃಶ ಚಿತ್ರಣಗಳು ಅಲ್ಲಲ್ಲಿ ಅನಾವರಣಗೊಂಡಿವೆ.

ಬಂಟ್ವಾಳ-ಮೂಡುಬಿದಿರೆ ರಸ್ತೆಯ ಸೊರ್ನಾಡು ಬಳಿ ಡಾಂಬರು ರಸ್ತೆಗೆ ಮಣ್ಣು ಚೆಲ್ಲಿ ಕೆಸರಿನ ರಾಡಿಯಾಗಿದೆ. ಇದರಿಂದ ವಾಹನ ಸಂಚಾರ ಅಪಾಯಕಾರಿಯಾಗಿದ್ದು ಎಚ್ಚರಿಕೆಯಿಂದ ಚಲಿಸಬೇಕಾಗಿದೆ. ಇಲ್ಲಿ ತಿರುವು ಮುರುವು ರಸ್ತೆಗಳೇ ಹೆಚ್ಚಾಗಿದ್ದು ವಾಹನ ಚಾಲಕರು ಮೈಯನ್ನೆಲ್ಲ ಕಣ್ಣಾಗಿಸಿಕೊಂಡು ವಾಹನ ಚಲಾಯಿಸಬೇಕು. ಈ ರಸ್ತೆಯಲ್ಲಿ ಬಂಟ್ವಾಳದಿಂದ ಪುಚ್ಚೆಮೊಗರುವರೆಗೆ ಚರಂಡಿಗಳ ನಿರ್ವಹಣೆ ಸಮಪರ್ಕವಾಗಿಲ್ಲ. ಕಳೆದ ವರ್ಷ ಈ ಹೊತ್ತಿಗೆ ಮಳೆಗಾಲದಲ್ಲಿ ರಸ್ತೆಯ ಸ್ಥಿತಿ ಶೋಚನೀಯವಾಗಿ ಪ್ರಯಾಣಿಕರು, ವಾಹನಗಳು ಪರದಾಡುವಂತಾಗಿತ್ತು. ಅಷ್ಟಾದರೂ ಈ ಬಾರಿಯ ಮಳೆಗಾಲಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ.

ಅಪಾಯಕಾರಿ ಚರಂಡಿ
ಗ್ರಾಮೀಣ ಭಾಗಗಳಲ್ಲಿ ಬಹುತೇಕ ರಸ್ತೆ ಬದಿ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿವೆ. ಇದರಿಂದ ಮಳೆ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲದೆ ರಸ್ತೆಯೇ ಚರಂಡಿಯಾಗಿದೆ. ರಸ್ತೆ ಬದಿ ಕುರುಚಲು ಗಿಡಗಳು, ಬಳ್ಳಿಗಳನ್ನು ತೆಗೆದು ಚರಂಡಿ ಹೂಳು ತೆರವುಗೊಳಿಸಿದಲ್ಲಿ ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿದು ಹೋಗಲು ಸಾಧ್ಯವಾಗುತ್ತದೆ. ಅಣ್ಣಳಿಕೆ ಬಳಿ ಇಳಿಜಾರು, ತಿರುವಿನಲ್ಲಿ ಡಾಂಬರು ರಸ್ತೆಗೆ ತಾಗಿಕೊಂಡು ಚರಂಡಿಯಿದ್ದು ಅಪಾಯಕಾರಿಯಾಗಿ ಗೋಚರಿಸುತ್ತಿದೆ. ಕೆಲವೆಡೆ ರಸ್ತೆಯ ಎಚ್ಚರಿಕೆ ಸೂಚನಾ ಫಲಕಗಳಿಗೆ ಬಳ್ಳಿ ಸುತ್ತಿ ಕಾಣದಂತಾಗಿದೆ. ರಸ್ತೆ ಬದಿ ಬಳ್ಳಿ ಹರಡಿ ಪಾದಚಾರಿಗಳು ನಡೆದಾಡಲು ಸ್ಥಳವಿಲ್ಲದಂತಾಗಿದೆ. ಅಲ್ಲಲ್ಲಿ ರಸ್ತೆ ಬದಿ ಎಸೆದ ತ್ಯಾಜ್ಯಗಳು, ಪ್ಲಾಸ್ಟಿಕ್ ಕೈ ಚೀಲಗಳು ಚರಂಡಿಯನ್ನು ಮುಚ್ಚಿ ಹಾಕಿವೆ. ಇದನ್ನು ತೆರವುಗೊಳಿಸದಿದ್ದಲ್ಲಿ ದುರ್ವಾಸನೆಯೊಂದಿಗೆ ಅನಾರೋಗ್ಯಕ್ಕೂ ಕಾರಣವಾಗಬಹುದು.

ಹೆದ್ದಾರಿ ಬದಿ ಚರಂಡಿ ನಿರ್ಮಾಣ
ಬಿ.ಸಿ.ರೋಡ್- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಬದಿ ಮಳೆ ನೀರು ಹರಿದು ಹೋಗಲು ಚರಂಡಿ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಗುರುವಾರ ಭಂಡಾರಿಬೆಟ್ಟು ಬಳಿ ಜೆಸಿಬಿ ಮೂಲಕ ಹೂಳು ತೆರವು ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ನಡೆಯಿತು.

- Advertisement -

Stay connected

278,673FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...