ಮಳೆ ಪ್ರಮಾಣ ಕಡಿಮೆಯಾದರೆ ಮೋಡ ಬಿತ್ತನೆಗೆ ಚಿಂತನೆ: ಚೆಲುವರಾಯಸ್ವಾಮಿ

Cloud Seeding
Published on

ಧಾರವಾಡ: ಮುಂಗಾರು ಮಳೆ ವಿಳಂಬವಾದರೆ ಮೋಡ ಬಿತ್ತನೆ ಮಾಡಲು ರಾಜ್ಯ ಸರ್ಕಾರ ಚಿಂತಿಸಿದೆ ಎಂಬ ಬಗ್ಗೆ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಸುಳಿವು ನೀಡಿದ್ದಾರೆ.

ಧಾರವಾಡ ಕೃಷಿ ವಿವಿ ಘಟಿಕೋತ್ಸವದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯದಲ್ಲಿ ಮುಂಗಾರು ಮಳೆ ತಡವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.30ರಷ್ಟು ಮಳೆ ಕಡಿಮೆಯಾಗಿದೆ. ಒಂದು ವಾರದಿಂದ ಮಳೆ ನಿರೀಕ್ಷೆ ಮಾಡುತ್ತಿದ್ದು, ತಡವಾಗುತ್ತಿದೆ ಎಂದು ಹೇಳಿದರು.

ಮುಂಗಾರು ವಿಳಂಬದಿಂದ ಕೃಷಿ ಚಟುವಟಿಕೆ ಆರಂಭಿಸಲು ಹಿಂದೇಟು ಹಾಕುವಂತಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹ ಮಾಡಿಟ್ಟುಕೊಂಡಿದ್ದು, ಮುಂದಿನ ಎರಡು ದಿನ ಕಾದು ನೋಡುತ್ತೇವೆ. ಒಂದು ವೇಳೆ ಮೂರು ದಿನಗಳ ಒಳಗಾಗಿ ಮಳೆಯಾಗದಿದ್ದರೆ ಮೋಡ ಬಿತ್ತನೆ ಮಾಡಲು ಚಿಂತನೆ ನಡೆಸುತ್ತೇವೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.

ಜೂನ್ ತಿಂಗಳು ಆರಂಭವಾದರೂ ಸರಿಯಾದ ಪ್ರಮಾಣದಲ್ಲಿ ಮಳೆ ಆಗದಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಗುರುವಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ, ಮೋಡ ಬಿತ್ತನೆ ಮಾಡುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net