ಮಹಿಳೆಯರಿಗೆ ಸಿಹಿಸುದ್ದಿ: ಮಾಸಿಕ 2000 ರೂಪಾಯಿ; ಆದೇಶ ಮಾಡಿಯೇ ಬಿಡ್ತು ನೂತನ ಸರ್ಕಾರ

Griha Lakshmi
ಕರ್ನಾಟಕದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಗೃಹಲಕ್ಷ್ಮಿ ಯೋಜನೆ
Published on

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮೊದಲಿಗೆ ಮಹಿಳೆಯರಿಗೆ ಸಿಹಿಸುದ್ದಿಯನ್ನು ನೀಡಿದೆ. ಅಂದರೆ ತನ್ನ ಐದು ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡುವ ಗ್ಯಾರಂಟಿಗೆ ಆದೇಶ ಮಾಡಿಬಿಡುವ ಮೂಲಕ ಬದ್ಧತೆಯನ್ನು ತೋರಿದೆ.

ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ "ಗೃಹಲಕ್ಷ್ಮಿ ಯೋಜನೆ"ಯನ್ನು ಅನುಷ್ಠಾನಗೊಳಿಸುವ ಸಂಬಂಧ ಸರ್ಕಾರ ಇಂದು ನಡೆದ ಸಚಿವ ಸಂಪುಟದ ತೀರ್ಮಾನದಂತೆ ಆದೇಶವನ್ನು ಹೊರಡಿಸಿದೆ.

ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000 ನೀಡುವ "ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯ ವಿವರವಾದ ರೂಪುರೇಷೆ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net