More

    ಶಾಲೆಗೆ ಬಂದ ಚಿಣ್ಣರಿಗೆ ಹಬ್ಬದ ವಾತಾವರಣದಲ್ಲಿ ಸ್ವಾಗತ

    ಮಂಗಳೂರು: ರಜಾ ಮಜಾ ಅನುಭವಿಸಿದ ದ.ಕ ಜಿಲ್ಲೆಯ ಚಿಣ್ಣರು, ಬುಧವಾರ ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಶಿಕ್ಷಕರು ಮಕ್ಕಳನ್ನು ಹಬ್ಬದ ವಾತಾವರಣದಲ್ಲಿ ಶಾಲೆಗೆ ಆತ್ಮೀಯವಾಗಿ ಸ್ವಾಗತಿಸಿದರು. ಹೊಸ ತರಗತಿಗೆ ವಿದ್ಯಾರ್ಥಿಗಳು ಪಾಲಕರೊಂದಿಗೆ ಖುಷಿಯಿಂದ ಆಗಮಿಸಿದರು.


    ಒಂದನೇ ತರಗತಿಗೆ ಸೇರ್ಪಡೆಗೊಂಡ ಮಕ್ಕಳಿಗೆ ಶಿಕ್ಷಕಿಯರು ಆರತಿ ಬೆಳಗಿ, ಗುಲಾಬಿ ಹೂವು, ಪೆನ್ನು, ಪೆನ್ಸಿಲ್, ಸಿಹಿತಿಂಡಿ ನೀಡಿ ತರಗತಿಗೆ ಬರಮಾಡಿಕೊಂಡರು. ಎಲ್ಲ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್, ಸಮವಸ್ತ್ರ ಮೊದಲ ದಿನವೇ ವಿತರಿಸಲಾಯಿತು. ಇದಕ್ಕಾಗಿ ಸೋಮವಾರದಿಂದಲೇ ಸಿದ್ಧತೆ ನಡೆಸಲಾಗಿತ್ತು.


    ಇಲಾಖೆಯ ಸೂಚನೆಯಂತೆ ಶಾಲೆಗಳನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ತರಗತಿಗಳನ್ನು ಸ್ವಚ್ಛಗೊಳಿಸಲಾಗಿತ್ತು. ಮೊದಲ ದಿನವೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಬಡಿಸಲಾಯಿತು. ಕೆಲವು ಶಾಲೆಗಳಲ್ಲಿ ಪಾಯಸ, ಸಿಹಿ ತಿಂಡಿಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಶಾಲಾಭಿವೃದ್ಧಿ ಸಮಿತಿ, ಜನಪ್ರತಿನಿಧಿಗಳು, ಹಿರಿಯ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು, ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿದರು.


    ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆಗಳಲ್ಲಿ ನೀರಿನ ಅಭಾವ ಇರುವಲ್ಲಿಗೆ ಟ್ಯಾಂಕರ್ ಮೂಲಕ ವ್ಯವಸ್ಥೆ ಮಾಡಲಾಯಿತು. ತಾಲೂಕು ಮಟ್ಟದಲ್ಲಿ ಕೆಲವು ಶಾಸಕರು ಶಾಲಾ ಪ್ರಾರಂಭೋತ್ಸವದಲ್ಲಿ ಭಾಗಿಯಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts