More

    ಬೆಳದಿಂಗಳು ಕಾರ್ಯಕ್ರಮ – ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ

    ಮುಧೋಳ: ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಮಕ್ಕಳ ಸಾಹಿತ್ಯ ಪರಿಷತ್ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತಿರುವುದು ಶ್ಲಾಘನೀಯ ಎಂದು ಮಹಾಲಿಂಗಪುರ ಕೆಎಲ್‌ಇ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು.

     ತಾಲೂಕಿನ ಕಸಬಾಜಂಬಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ತಾಲೂಕು  ಘಟಕ ಹಾಗೂ ಬೆಳಗಲಿ ಮತ್ತು ಲೋಕಾಪುರ ವಲಯ ಘಟಕಗಳ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಚಟುವಟಿಕೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಉಪನ್ಯಾಸ ಕಾರ್ಯಕ್ರಮ ಬೆಳದಿಂಗಳು-1ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

     ಕಸಬಾಜಂಬಗಿ ಹಿರೇಮಠದ ರಾಜಶೇಖರ ದೇವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಬಹುದೊಡ್ಡ ಪ್ರತಿಭೆ ಅಡಗಿರುತ್ತದೆ. ಅದನ್ನು ಶಿಕ್ಷಕರು ಗುರುತಿಸಲು ಸದಾ ಕ್ರಿಯಾಶೀಲರಾಗಿ ಕಾರ್ಯ ಮಾಡಬೇಕು ಎಂದು ಹೇಳಿದರು.

     ಶಬ್ದ ಗಾರುಡಿಗ ಡಾ.ಸಿದ್ದು ದಿವಾಣ, ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಈರಣ್ಣ ಲಟ್ಟಿ, ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮೀ ಕಗಲಗೊಂಬ, ಗೌರವ ಅಧ್ಯಕ್ಷ ವೆಂಕಟೇಶ ಗುಡೆಪ್ಪನವರ, ಕಸಾಪ ಅಧ್ಯಕ್ಷ ಆನಂದ ಪೂಜಾರಿ ಮಾತನಾಡಿದರು.

     ಪಿಕೆಪಿಎಸ್ ಅಧ್ಯಕ್ಷ ಚಿದಾನಂದ ಪಂಚಕಟ್ಟಿಮಠ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಸದಾಶಿವ ಮಾಳಿ, ಎನ್.ಟಿ.ಪಾಟೀಲ, ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ಮಾಳಿ, ಮುಖ್ಯಗುರು ಎಸ್.ಕೆ.ಮಠಪತಿ, ಕೋಶಾಧ್ಯಕ್ಷ ರಮೇಶ ಕಂಕನವಾಡಿ, ಪ್ರಧಾನ ಕಾರ್ಯದರ್ಶಿ ರಮೇಶ ಅರಕೇರಿ, ರಾಜೇಶ್ವರಿ ಕಂಕನೋಡಿ, ಮಹಾಂತೇಶ ಕುಂಬಾರ, ಕಾಶಿಬಾಯಿ ಕಿಲಾರಿ, ಹನುಮಂತ ಚಂದಪ್ಪನವರ, ಸಂಗಮೇಶ ಶಿರಗುಂಪಿ, ಸಂಗಮೇಶ ನೀಲಗುಂದ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ ನಿಡೋಣಿ ಇದ್ದರು.

     ವಿವಿಧ ಸಾಂಸ್ಕೃತಿಕ ಚಟುವಟಿಕೆಯಲ್ಲಿ ವಿಜೇತ 6 ಶಾಲೆ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಗೌರವಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts