ಕಾರ್ಕಳ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯೊಂದಿಗೆ ನೈತಿಕ ಮೌಲ್ಯ ಬೆಳೆಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಹೇಳಿದರು.
ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಕ್ರಿಯೇಟಿವ್ ಸ್ಫೂರ್ತಿ ಮಾತು ಸರಣ ಉಪನ್ಯಾಸದಲ್ಲಿ ‘ಶಿಕ್ಷಣದಲ್ಲಿ ಜೀವನ ಮೌಲ್ಯ’ ವಿಷಯದ ಕುರಿತು ಮಾತನಾಡಿದರು.
ಉಪಪ್ರಾಂಶುಪಾಲ ಜೋಯೆಲ್ ಮನೋಜ್ ಫರ್ನಾಂಡಿಸ್, ಆಡಳಿತಾಧಿಕಾರಿ ಜಯಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ತ್ರಿಶಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಹೆಗಡೆ ಸ್ವಾಗತಿಸಿದರು.