More

    ಗುಜರಾತ್​ನಲ್ಲಿ ತೂಗುಸೇತುವೆ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಕೇಂದ್ರ-ರಾಜ್ಯ ಸರ್ಕಾರ

    ಅಹಮದಾಬಾದ್​: ಮೊಬಿರ್ ಜಿಲ್ಲೆಯ ಮಚ್ಚು ನದಿಗೆ ನಿರ್ಮಿಸಲಾಗಿದ್ದ ತೂಗುಸೇತುವೆ ಕುಸಿದು 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂ., ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿಮಂತ್ರಿ ಘೋಷಿಸಿದ್ದಾರೆ. ಗುಜರಾತ್​ ರಾಜ್ಯ ಸರ್ಕಾರವೂ ಮೃತರ ಕುಟುಂಬಕ್ಕೆ 4 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

    ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಗುಜರಾತ್​ ಸಿಎಂ ಸಿಎಂ ಭೂಪೇಂದ್ರ ಪಟೇಲ್​, ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಗುಜರಾತ್​ನಲ್ಲಿ ಇಂದು(ಸೋಮವಾರ) ನಿಗದಿಯಾಗಿದ್ದ ನರೇಂದ್ರ ಮೋದಿ ರ್ಯಾಲಿ ರದ್ದಾಗಿದೆ.

    ಈ ದುರಂತದ ಜವಾಬ್ದಾರಿಯನ್ನು ಗುಜರಾತ್​ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಗುಜರಾತ್​ನ ಕಾರ್ಮಿಕ ಮತ್ತು ಉದ್ಯೋಗ ಸಚಿವ ಬ್ರಿಜೇಶ್​ ಶರ್ಮಾ ಹೇಳಿದ್ದಾರೆ.

    ತೂಗುಸೇತುವೆ ದುರಂತದ ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಧ್ಯವಾದ ಎಲ್ಲ ನೆರವು ನೀಡುವಂತೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

    ಭಾನುವಾರ ಸಂಜೆ 6.30ರಲ್ಲಿ ಪ್ರವಾಸಿಗರು ಸೇರಿ 500ಕ್ಕೂ ಅಧಿಕ ಮಂದಿ ಸೇತುವೆ ಮೇಲೆ ನಿಂತಿದ್ದರು. ಆಗ ಸೇತುವೆ ಕುಸಿದಿದ್ದು, 100ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿದ್ದಾರೆ. ಆರಂಭದಲ್ಲಿ ಸಾವಿನ ಸಂಖ್ಯೆ 30 ಎಂದು ಅಂದಾಜಿಸಲಾಗಿತ್ತು. ಸೋಮವಾರ ಬೆಳಗಿನಜಾವ ಬಂದ ವರದಿ ಪ್ರಕಾರ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಕೆಲವರು ಈಜಿ ದಡ ಸೇರಿದ್ದಾರೆ, ಕಾರ್ಯಾಚರಣೆ ನಡೆಸಿ 78ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, 19 ಮಂದಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.

    ಗುಜರಾತ್​ನಲ್ಲಿ ತೂಗುಸೇತುವೆ ಕುಸಿತ: 100ಕ್ಕೂ ಹೆಚ್ಚು ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

    ಹೊಸದುರ್ಗದಲ್ಲಿ ಇಬ್ಬರು ಮಕ್ಕಳೊಂದಿಗೆ ಚೆಕ್​ ಡ್ಯಾಂಗೆ ಹಾರಿ ಪ್ರಾಣಬಿಟ್ಟ ತಾಯಿ! ಸಾವಿಗೂ ಮುನ್ನ ಆಕೆ ಮಾಡಿಟ್ಟ ವಿಡಿಯೋ ನೋಡಿದ್ರೆ ಮನಕಲಕುತ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts